ರಾಜ್ಯ
ಬೆಂಗಳೂರಿನ ವಸಂತನಗರ ಬಡಾವಣೆಯಲ್ಲಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮುಖ್ಯಮಂತ್ರಿ ಮಾನ್ಯ ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಸಂತನಗರ ಬಡಾವಣೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗಲಿರವ ಸರ್ಕಾರದ ಹಿರಿಯ ಅಧಿಕಾರಿಗಳ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ್, ಸಂಸದ ಪಿಸಿ ಮೋಹನ್ , ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಲೋಕೋಪಯೋಗಿ ಇಲಾಖೆಯ ಅಪರ ಮುಖ ಕಾರ್ಯದರ್ಶಿ ಅನಿಲಕುಮಾರ, ಕಾರ್ಯದರ್ಶಿ ಕೃಷ್ಣಾ ರೆಡ್ಡಿ, ಲೋಕೋಪಯೋಗಿ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ ವಿರುಲೂಪಾಕ್ಷ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.