ಬೆಂಗಳೂರಿನ ಹೋಟೆಲ್‌ನಲ್ಲಿ ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಡ್ರಗ್ಸ್ ಸೇವಿಸಿದ ಐವರ ಬಂಧನ.ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ಮತ್ತು ಇನ್ಸ್‌ಪೆಕ್ಟ ಅಮರೀಶ್.

ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸರಿಂದ ಹೋಟೆಲ್ ಮೇಲೆ ದಾಳಿ ಮಾಡಲಾಗಿದೆ. ಪಾರ್ಟಿಯಲ್ಲಿದ್ದ 50ಕ್ಕೂ ಅಧಿಕ ಜನರಿಗೆ ಮೆಡಿಕಲ್ ಟೆಸ್ಟ್ ಮಾಡಲು ಮೂರು ಟಿಟಿ ವಾಹನಗಳಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು.
ಬೆಂಗಳೂರು: ನಗರದ ಹೋಟೆಲ್‌ನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಡಿ ದಿ ಪಾರ್ಕ್ ಫೈವ್‌ಸ್ಟಾರ್ ಹೋಟೆಲ್ ಮೇಲೆ ಹಲಸೂರು ಪೊಲೀಸರಿಂದ ದಾಳಿ ಮಾಡಲಾಗಿದೆ. ಹಲಸೂರು ಬಳಿಯ ಪಾರ್ಕ್ ಹೋಟೆಲ್‌ನ ಪಾರ್ಟಿಯಲ್ಲಿ ಬಾಲಿವುಡ್ ನಟ ಭಾಗಿ ಶಂಕೆ ವ್ಯಕ್ತವಾಗಿದೆ. ರಾತ್ರಿ 12 ಗಂಟೆಗೆ ಹೋಟೆಲ್ ಮೇಲೆ ಪೊಲೀಸರು ದಾಳಿ ಮಾಡಿದ್ದು, ಹೋಟೆಲ್‌ನಲ್ಲಿ ದೊಡ್ಡ ಪ್ರಮಾಣದ ಡ್ರಗ್ಸ್ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎನ್ನಲಾಗುತ್ತಿದೆ. ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಅಧಿಕ ಪೊಲೀಸರಿಂದ ಹೋಟೆಲ್ ಮೇಲೆ ದಾಳಿ ಮಾಡಲಾಗಿದೆ. ಪಾರ್ಟಿಯಲ್ಲಿದ್ದ 50ಕ್ಕೂ ಅಧಿಕ ಜನರಿಗೆ ಮೆಡಿಕಲ್ ಟೆಸ್ಟ್ ಮಾಡಲು ಮೂರು ಟಿಟಿ ವಾಹನಗಳಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು. ಪಾರ್ಟಿಯಲ್ಲಿ ಐವರು ಡ್ರಗ್ಸ್ಸೇವನೆ ಮಾಡಿರುವುದು ಧೃಡಪಟ್ಟಿದ್ದು, ಐವರನ್ನ ವಶಕ್ಕೆ ಪಡೆದು ಎನ್‌ಡಿ ಪಿಎಸ್ ಆಕ್ಟ್ ಅಡಿ ಹಲಸೂರು ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.