Uncategorized

ಬೆಂಗಳೂರು- ಚೆನ್ನೈ ಎಕ್ಸ್​ ಪ್ರೆಸ್​ ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ವೇ ಅನ್ನು ವೈಮಾನಿಕ ಪರಿಶೀಲನೆ ನಡೆಸಿದರು.ಕೇಂದ್ರ ಸಚಿವ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದ್ದು ಕೇಂದ್ರ ಸಚಿವರಿಗೆ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಸಂಸದ ಮುನಿಸ್ವಾಮಿ ಸಾಥ್ ನೀಡಿದರು.

10 ಲೇನ್​ನ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ವೇ ಪ್ರಯಾಣದ ಸಮಯ 7 ಗಂಟೆಗಳಿಂದ 3 ಗಂಟೆಗಳವರೆಗೆ ಕಡಿತಗೊಳಿಸುವ ಗುರಿಯನ್ನು ಹೊಂದಿದೆ. ಈ ಕುರಿತು ಟ್ವೀಟ್ ಮಾಡಿರುವ ನಿತಿನ್ ಗಡ್ಕರಿ, ನಾವು 16,730 ಕೋಟಿ ರೂ. ಮೌಲ್ಯದ ಈ 262 ಕಿಮೀ ಉದ್ದದ 8 ಲೇನ್ ಹೆದ್ದಾರಿಯನ್ನು ನಿರ್ಮಿಸುತ್ತಿದ್ದೇವೆ.

ಇದನ್ನು ಗಂಟೆಗೆ 120 ಕಿಮೀ ವೇಗದಲ್ಲಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರ 300 ಕಿಮೀ.ಯಿಂದ 262 ಕಿಮೀಗೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button