ರಾಜ್ಯ

ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ : ಆರೋಪಿಗಳ ಆಸ್ತಿ ಮುಟ್ಟುಗೋಲು

ಮಂಗಳೂರು : ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಆರು ಜಿಲ್ಲೆಯ ಎಸ್ಪಿ, ಎನ್ ಐಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಿದರು.

ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಸಭೆಯ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದರು.ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ.

ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಸಭೆ ಮಾಡಲಿದ್ದೇವೆ. ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ. ಮುಖ್ಯ ಆರೋಪಿಗಳಿಗೆ ಪತ್ಯಕ್ಷ ಪರೋಕ್ಷವಾಗಿ ಸಹಕಾರ ಮಾಡಿದವರಿಗೂ ಕ್ರಮ ಆಗಲಿದೆ.

ಎನ್ ಐಎ ಅಧಿಕಾರಿಗಳ‌ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಎನ್ ಐಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಈ ಕೆಲಸ ಮಾಡಲಿದೆ.

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ. ಅವರ ಫೋಟೋ, ಮನೆ ವಿಳಾಸ, ತಂದೆ-ತಾಯಿ, ಹೆಂಡತಿ ಮಾಹಿತಿ ಎಲ್ಲವೂ ಲಭ್ಯವಿದೆ. ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ.

ಆವಾಗವಾಗ ಅವರ ಸ್ಥಳ ಬದಲಾವಣೆ ಮಾಡಲಾಗುತ್ತಿದೆ. ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ. ಆರೋಪಿಗಳಿಗೆ ಪಿಎಫ್ಐ ಲಿಂಕ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅಲೋಕ್ ಕುಮಾರ್, ನಾವು ಯಾವುದೇ ದಾಖಲೆ ಇಲ್ಲದೇ ಮಾತನಾಡೋದಿಲ್ಲ.

ದಾಖಲೆ ಜೊತೆಗೆ ಮಾತನಾಡುತ್ತೇವೆ, ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್ಐ ಲಿಂಕ್ ಇದೆ. ಈ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ. ತನಿಖೆಯ ಬಳಿಕ ಯಾರಿಗೆಲ್ಲಾ ಪಿಎಫ್ಐ ಲಿಂಕ್ ಇದೆ ಎಂಬುವುದರ ಬಗ್ಗೆ ಹೇಳುತ್ತೇವೆ.

ಈಗಾಗಲೇ ಪ್ರಕರಣ ತನಿಖೆಯ ಹಂತದಲ್ಲಿದೆ. ಈ ಸಂಧರ್ಭದಲ್ಲಿ ಪ್ರಕರಣಕ್ಕೆ ಕೇರಳ ಲಿಂಕ್ ಇರುವ ಬಗ್ಗೆ ಹೇಳಲು ಸಾಧ್ಯವಿಲ್ಲ. ಈಗ ಬಂಧನವಾಗಿರುವ ಏಳು ಮಂದಿಯೂ ಸ್ಥಳೀಯರೇ ಆಗಿದ್ದಾರೆ.

ಅವರಿಗೆ ನಿರ್ದೇಶನ ಕೊಟ್ಟಿರೋದು ಯಾರು ಎಂಬುವುದರ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ಮಾಡುತ್ತೇವೆ. ಬೆಳ್ಳಾರೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಸಭೆಯನ್ನು ಮಾಡುತ್ತೇವೆ.

ಎನ್ ಐಎ ಅಧಿಕಾರಿಗಳು, ಮಂಡ್ಯ, ಚಾಮರಾಜನಗರ ಹಾಸನ, ಚಿಕ್ಕಮಗಳೂರು, ಉಡುಪಿ,ದಕ್ಷಿಣ ಕನ್ನಡ ಎಸ್ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button