ಭಾರೀ ಮಳೆ ಹಿನ್ನೆಲೆ: ರಾಜ್ಯದ ಈ ಜಿಲ್ಲೆಯಲ್ಲಿ ಜುಲೈ 9ರವರೆಗೆ ರಜೆ ಘೋಷಣೆ!

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಬೆಟ್ಟ ಗುಡ್ಡಗಳು ಧರೆಶಾಹಿಯಾಗುತ್ತಿವೆ. ಇನ್ನು ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಂಡ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಂಡು ಜುಲೈ 9ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಈ ಹಿಂದೆ ಜುಲೈ 5 ಮತ್ತು 6ರಂದು ರಜೆ ನೀಡಲಾಗಿತ್ತು. ಇದೀಗ ರಜೆಯನ್ನು ವಿಸ್ತರಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದು, “ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಭಿಪ್ರಾಯದಂತೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ, ಕಳಸ ತಾಲೂಕು ಹಾಗೂ ಶೃಂಗೇರಿ ವ್ಯಾಪ್ತಿಯಲ್ಲಿನ ಶೈಕ್ಷಣಿಕ ವಿದ್ಯಾಸಂಸ್ಥೆಗಳಿಗೆ (ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಂಸ್ಥೆ) ಜುಲೈ 6ರಿಂದ 9ರವರೆಗೆ ರಜೆ ಘೋಷಿಸಲಾಗಿದೆ” ಎಂದು ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಮತ್ತು ಎನ್‌ಆರ್‌ಪುರ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.