
‘ಒಂದು ವರ್ಷವಾದರೂ ನನ್ನ ರಾಜೀನಾಮೆ ಅಂಗೀಕಾರ ಮಾಡಿಲ್ಲ. ನನ್ನನ್ನು ಯಾವುದಲ್ಲಾದರೂ ಸಿಕ್ಕಿಸಬಹುದು ಎನ್ನುವ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ಎಎಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿ, ‘ಬಿಜೆಪಿಯವರು ಭಯದ ವಾತಾವರಣವನ್ನು ಸೃಷ್ಟಿಸಿದ್ದಾರೆ. ನಾನು ಬಿಜೆಪಿ ಸೇರಿದ್ರೆ ಏನೂ ತೊಂದರೆಯಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನಾನು ಪೊಲೀಸ್ ಅಧಿಕಾರಿ ಸ್ಥಾನಕ್ಕೆ ಕಳೆದ ವರ್ಷ ಸೆಪ್ಟೆಂಬರ್ 16ರಂದು ರಾಜೀನಾಮೆ ಕೊಟ್ಟಿದ್ದೇನೆ. ಆಲ್ ಇಂಡಿಯಾ ಸರ್ವಿಸಸ್ ಪ್ರಕಾರ
ನನ್ನ ಪಿಂಚಣಿ ರೆಡಿ ಮಾಡಿಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮೌಖಿಕವಾಗಿ 15 ಬಾರಿ ಹಾಗೂ ನಾಲ್ಕು ಸಲ ಪತ್ರ ಬರೆದುಕೊಟ್ಟಿದ್ದೇನೆ. ಆದರೂ ಈವರೆಗೂ ನನ್ನ ರಾಜೀನಾಮೆ ಅಂಗೀಕರಿಸಿಲ್ಲ ಎಂದರು.
ನಾನು ಬಿಜೆಪಿ ಸೇರಿದ್ರೆ ಇದೆಲ್ಲ ತೊಂದ್ರೆ ಆಗಲ್ಲ ಅಂತ ಪರೋಕ್ಷವಾಗಿ ಹೇಳಿದ್ದಾರೆ. ನನ್ನದಿರಲಿ, ನಮ್ಮ ಕೇಂದ್ರ ನಾಯಕರಾದ ಸಿಸೋಡಿಯಾ ಅವರಿಗೆ ಗಾಳ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.