ಮಗಳನ್ನು ಸಾಕಿ ಬೆಳಸಲು ಸಾಧ್ಯವಿಲ್ಲವೆಂದು ಬರ್ಬರವಾಗಿ ಹತ್ಯೆ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ: ಹೆತ್ತ ಮಗಳನ್ನು ಸಾಕಲು ಆಗುದಿಲ್ಲ ಮತ್ತು ಅವಳ ವಿದ್ಯಾಭ್ಯಾಸ ಮಾಡಿಸಲು ಸಾಧ್ಯವಾಗುದಿಲ್ಲ ಎಂದುಕೊಂಡು ಬರ್ಬರವಾಗಿ ಹತ್ಯೆ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆ ಹದ್ದಿಯ ಮಂಗಸೂಳಿ ಮಲ್ಲಾರವಾಡಿ ಬಸವರಾಜ ಈರಪ್ಪ ಮಗದುಮ್ಮ(35) ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ. ಬಸವರಾಜ ಮಗದುಮ್ಮ ತನ್ನ ಮಗಳಾದ ಸಂಗೀತಾ ಬಸವರಾಜ ಮಗದುಮ್ಮ(7)ಳನ್ನು 2016ರ ಸೆಪ್ಟೆಂಬರ್ 6 ರಂದು ಅಪ್ಪಾಸಾಹೇಬ್ ಶಿಂಧೆ ಅವರ ಪತ್ರಾಸ ಶೆಡ್‍ನಲ್ಲಿ(ಛಾವಣಿ ಮನೆ) ಯಾರು ಇಲ್ಲದ ಸಮಯ ನೋಡಿಕೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದ.
ಈ ಕುರಿತು ಅಥಣಿ ಸಿಪಿಐ ಎಸ್.ಎಚ್.ಶೇಖರಪ್ಪ ದೋಷಾರೋಪನ ಪತ್ರ ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ ಅವರು ಆರೋಪಿ ಬಸವರಾಜ ಮಗದುಮ್ಮಗೆ ಜೀವಾವಧಿ ಶಿಕ್ಷೆ ನೀಡಿ ಎಂದು ತೀರ್ಪು ನೀಡಿದ್ದಾರೆ.