ರಾಜ್ಯ

ಮಣ್ಣಿನಗಣಪ ಜಾಗೃತಿಗೆ ಕರೆ : ಅಶ್ವತ್ಥ್

ಗಣೇಶೋತ್ಸವ ಸಂದರ್ಭದಲ್ಲಿ ಮಣ್ಣಿನ ಮೂರ್ತಿಗಳನ್ನೇ ಪ್ರತಿಷ್ಠಾಪಿಸುವ ಸಂಬಂಧ ಜನಜಾಗೃತಿ ಮೂಡಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಾರಿಯ ಗಣೇಶೋತ್ಸವ ಸಂದರ್ಭದಲ್ಲಿ ಗಣೇಶಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ ಎಲ್ಲವನ್ನೂ ಸುಗಮವಾಗಿ ನಡೆಸುವ ಸಂಬಂಧ ಇಂದು ಬಿಬಿಎಂಪಿ ಪೊಲೀಸ್ ಮತ್ತು ಅಗ್ನಿಶಾಮಕ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸ್ಯಾಂಕಿಕೆರೆ ಪ್ರದೇಶದ ಆವರಣದಲ್ಲಿ ನೂಕು ನುಗ್ಗಲು ಉಂಟಾಗದಂತೆ ಇದನ್ನು ತಡೆಯಲು ಕ್ರಮಕೈಗೊಳ್ಳಿ. ಸ್ಯಾಂಕಿಕೆರೆ ರಸ್ತೆಯನ್ನು ಮೊದಲ ಮೂರು ದಿನ ಏಕಮುಖ ಸಂಚಾರ ವ್ಯವಸ್ಥೆಯನ್ನಾಗಿ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಹೂವು ಮತ್ತು ಇತರೆ ತ್ಯಾಜ್ಯಗಳನ್ನು ಕೂಡಲೇ ತೆರವುಗೊಳಿಸಬೇಕು.

ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ನಿಗಾವಹಿಸಿ, ಜತೆಗೆ ನುರಿತ ಈಜುಗಾರರು ಸ್ಥಳದಲ್ಲಿ ಸಜ್ಜಾಗಿರುವಂತೆ ನೋಡಿಕೊಳ್ಳಿ ಎಂದು ಸಚಿವರು ನಿರ್ದೇಶನ ನೀಡಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button