ಅಪರಾಧ

ಮದ್ರಾಸ್ ಹೈಕೋರ್ಟ್‌ನಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

ತನ್ನ ಮಗನಿಗಾಗಿ ಜಾತಿ ಪ್ರಮಾಣ ಪತ್ರವನ್ನು ಪಡೆಯಲು ಹೆಣಗಾಡುತ್ತಿದ್ದ ವ್ಯಕ್ತಿಯೋರ್ವ ಮದ್ರಾಸ್ ಹೈಕೋರ್ಟ್ ನಲ್ಲಿ ಬೆಂಕಿ ಹಚ್ಚಿಕೊಂಡು ಮೃತ ಪಟ್ಟಿದ್ದಾನೆ.ಮೃತ ವ್ಯಕ್ತಿಯನ್ನು ಕಾಂಚೀಪುರಂನ ವೇಲ್ಮುರುಗನ್ (೪೯) ಎಂದು ಗುರುತಿಸಲಾಗಿದೆ. ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರುವ ‘ಮಲೈಕುರವರ್ ಎಂಬ ಜಾತಿ ಪ್ರಮಾಣಪತ್ರವನ್ನು ಪಡೆಯಲು ವೇಲ್ಮುರುಗನ್ ಓಡಾಡುತ್ತಿದ್ದರು.

ಆದರೆ ಜಾತಿ ಪ್ರಮಾಣಪತ್ರ ಪಡೆಯಲು ಸಾಧ್ಯವಾಗದ ಹಿನ್ನೆಲೆ ವೇಲ್ಮುರುಗನ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಶೇ.೯೫ರಷ್ಟು ಸುಟ್ಟ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ವಿಷಯವನ್ನು ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ ನ್ಯಾಯಮೂರ್ತಿ ಸುಬ್ರಮಣಿಯನ್ ಅವರು, ಜಾತಿ ಪ್ರಮಾಣಪತ್ರಗಳನ್ನು ನೀಡುವಲ್ಲಿ ಹಲವಾರು ಅಕ್ರಮಗಳು ನಡೆದಿರುವುದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ಮೃತ ವ್ಯಕ್ತಿ ಮತ್ತು ಅವರ ಪುತ್ರನಿಗೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಹಕ್ಕು ಉಲ್ಲಂಘನೆಯಾಗಿದೆಯೇ ಎಂಬುದನ್ನು ನ್ಯಾಯಾಲಯ ಪರಿ ಶೀಲಿಸಬೇಕಿದೆ. ಈ ಘಟನೆಯನ್ನು ಸುಮ್ಮನೆ ಬಿಡಲಾಗುವುದಿಲ್ಲ. ಏಕೆಂದರೆ ಇದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ತಿಳಿಸಿ ದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button