ಅಪಘಾತಅಪರಾಧಬೆಂಗಳೂರುರಾಜ್ಯ

ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ನೇಣಿಗೆ ಶರಣು

ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಡಿ.ಕೆ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗೀತಾ(25) ಆತ್ಮಹತ್ಯೆಗೆ ಶರಣಾದ ವಿವಾಹಿತೆ.

ಗೀತಾ ಕಳೆದ ಮೂರು ತಿಂಗಳ ಹಿಂದೆ ಪ್ರವೀಣ್ ಎಂಬುವವರನ್ನ ಪ್ರೀತಿಸಿ ವಿವಾಹವಾಗಿದ್ದು ಈ ಮಧ್ಯೆ ಇಂದು ಮನೆಯಲ್ಲಿ ಯಾರು ಇಲ್ಲದಿರುವಾಗ ನೇಣಿಗೆ ಕೊರಳೊಡ್ಡಿರುವ ಘಟನೆ ನಡೆದಿದೆ.

ಇನ್ನು ಪತಿ ಪ್ರವೀಣ್ ಊಟಕ್ಕೆಂದು ಮನೆಗೆ ಬಂದ ವೇಳೆ ಪತ್ನಿ ಗೀತಾ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬಂಗಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button