ರಾಜ್ಯ
ಮಾಜಿ ಸಚಿವ ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ.

2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆಯಾಗಿದ್ದು ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯು ಆರ್.ವಿ ದೇಶಪಾಂಡೆ ಅವರನ್ನು ಆಯ್ಕೆ ಮಾಡಿದೆ.
ಸಮಿತಿಯಲ್ಲಿ ಸಭಾನಾಯಕ, ವಿರೋಧ ಪಕ್ಷದ ನಾಯಕರು ಸಮಿತಿಯಲ್ಲಿದ್ದಾರೆ.ಇಂದು ವಿಧಾನಸಭೆಯಲ್ಲಿ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು.ಆರ್.ವಿ. ದೇಶಪಾಂಡೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾಗಿದ್ದಾರೆ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಳೆದ ವರ್ಷದಿಂದ ಆರಂಭಗೊಂಡಿದ್ದು, ಮೊದಲ ಪ್ರಶಸ್ತಿಯನ್ನು ಶಿಕಾರಿಪುರ ಶಾಸಕ ಬಿ.ಎಸ್. ಯಡಿಯೂರಪ್ಪಗೆ ನೀಡಲಾಗಿತ್ತು.