
ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿ ದುರ್ಗದ ದೇವಸ್ಥಾನದ ಸಮೀಪದ ಹಾಲಮ್ಮನ ತೋಪಿನ ಬಳಿ ನಡೆದಿದೆ.ಕೊಲೆಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎನ್ನುವ ಬಗ್ಗೆ ತನಿಖೆಗೆ ಮುಂದಾಗಿದ್ದಾರೆ.ಕೊಲೆಗೀಡಾದ ಯುವಕನನ್ನು ದಾವಣಗೆರೆ ನಗರದ ನಿಟುವಳ್ಳಿಯ ಧನ್ಯಕುಮಾರ್ ಎನ್ನಲಾಗಿದೆ. ಊಟಕ್ಕೆ ಕರೆದು ಹತ್ಯೆ ಮಾಡಿರಬಹುದು ಎಂದು. ಶಂಕಿಸಲಾಗಿದೆ.ದೇಹದಾರ್ಡ್ಯ ಪಟುವಾಗಿದ್ದ ಧನ್ಯಕುಮಾರ್, ಹಲವಾರು ದೇಹದಾರ್ಡ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದರು. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾದರೂ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತರೇ ಆತನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬುಧವಾರ ಯುವಕನೊಬ್ಬನ ಜತೆ ಉಚ್ಚಂಗಿದುರ್ಗಕ್ಕೆ ಹೋಗಿ ಬರುವುದಾಗಿ ತನ್ನ ಸ್ನೇಹಿತರ ಬಳಿ ಧನ್ಯಕುಮಾರ್ ಹೇಳಿದ್ದ ಎನ್ನುವ ಮಾಹಿತಿ ಕೇಳಿ ಬರುತ್ತಿವೆ. ಉಚ್ಚಂಗಿದುರ್ಗದ ಹಾಲಮ್ಮ ತೋಪಿನಲ್ಲಿ ರಕ್ತಸಿಕ್ತವಾಗಿ ಬಿದ್ದಿರುವ ಧನ್ಯಕುಮಾರ್ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಕೊಲೆಯ ಜಾಡು ಹಿಡಿದು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಅರಸೀಕೆರೆ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.