ಮಿಂಚಿದ ಹಾರ್ದಿಕ್ ಪಾಂಡ್ಯ, ಪಾಕ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು

ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟಿ.20 ಟೂರ್ನಿಯ ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ತಂಡವು ಐದು ವಿಕೆಟ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡವು ಪಾಕಿಸ್ತಾನ ತಂಡವನ್ನು 147/10 ರನ್ ಗಳಿಗೆ ನಿಯಂತ್ರಿಸಿತು. ಪಾಕ್ ತಂಡದ ಪರವಾಗಿ ರಿಜ್ವಾನ್ 43 ಹಾಗೂ ಇಫ್ತಿಕಾರ್ ಅಹಮ್ಮದ್ 28 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.
ಇನ್ನೊಂದೆಡೆಗೆ ಭಾರತದ ಪರವಾಗಿ ಭುವನೇಶ್ವರ್ ಕುಮಾರ್ ನಾಲ್ಕು ಹಾಗೂ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ ಪಾಕ್ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.
ಇನ್ನೊಂದೆಡೆಗೆ 148 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ತಂಡದ ಮೊತ್ತ 1 ರನ್ ಆಗಿದ್ದಾಗ ಕೆ.ಎಲ್ ರಾಹುಲ್ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತವನ್ನು ಎದುರಿಸಿತು.
ಇದಾದ ನಂತರ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 35 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಅಂತಿಮವಾಗಿ ರವೀಂದ್ರ ಜಡೇಜಾ 35 ಹಾಗೂ ಹಾರ್ದಿಕ್ ಪಾಂಡ್ಯ 33 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.