ಬೆಂಗಳೂರು

ಮುಖ್ಯ ಆಯುಕ್ತರ ನಡೆ ಬಿಬಿಎಂಪಿ ವಲಯದ ಕಡೆ

ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು, ಬಗೆಹರಿಸಲು ವಲಯವಾರು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಬಿಬಿಎಂಪಿ ಮುಂದಾಗಿದೆ.

ಸಾರ್ವಜನಿಕರು ಅಹವಾಲುಗಳನ್ನು ನೀಡಲು ದೂರದಿಂದ ಬರುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನುಒಟ್ಟು 8 ವಲಯಗಳನ್ನಾಗಿ ವಿಂಗಡಿಸುವ ಮೂಲಕ ಹೊಸ ಪ್ಲಾನ್ ರೂಪಿಸಲಾಗಿದೆ.

ವಲಯ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯ ಚಟುವಟಿಕೆಗಳನ್ನು ವಲಯದಲ್ಲೇ ಇದ್ದು ಪರಿಶೀಲಿಸಿ ಬಗೆಹರಿಸುವ ಕ್ರಮಕ್ಕೆ ಮುಂದಾಗಿದೆ.

ಇಂದು ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬೆಳಗ್ಗೆ 10ರಿಂದ 2 ಗಂಟೆವರೆಗೆ ಕಾರ್ಯ ನಿರ್ವಹಣೆ ಮಾಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ನಂತರ ವಲಯ ಆಯುಕ್ತರಾದ ಡಾ.ಹರೀಶ್ಕುಮಾರ್ ಅವರು 2ರಿಂದ 5 ಗಂಟೆವರೆಗೆ ಕಾರ್ಯ ನಿರ್ವಹಣೆ ಮಾಡಿದರು.

ಇದೇ ರೀತಿ ಎಲ್ಲಾ ವಲಯಗಳಲ್ಲಿ ಆಯಾ ವಲಯ ಆಯುಕ್ತರು ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ ಪರಿಹರಿಸುವ ಕೆಲಸ ಮಾಡುವ ಮೂಲಕ ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಮುಂದಾಗಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button