ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಅರೆಸ್ಟ್..!

ಬೆಂಗಳೂರು: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.
ಈ ಹಿನ್ನೆಲೆ ಶ್ರೀಗಳನ್ನು ಬಂಧಿಸಿರುವ ಪೊಲೀಸರು ಚಿತ್ರದುರ್ಗ ಪೊಲೀಸ್ ಠಾಣೆಯತ್ತ ಕರೆದೊಯ್ಯುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.ಪೋಕ್ಸೋ ಕಾಯ್ದೆಯಡಿ ಶ್ರೀಗಳ ವಿರುದ್ಧ ಪ್ರಕರಣಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆ ಆಗಸ್ಟ್ 26ರಂದು ಶ್ರೀಗಳು ಸೇರಿದಂತೆ ಐವರ ವಿರುದ್ಧ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ನೆರವು ಪಡೆದು ಶ್ರೀಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಬಳಿಕ ಈ ಪ್ರಕರಣವು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು.ಮುರುಘಾ ಶ್ರೀಗಳು A-1 ಆರೋಪಿಫೋಕ್ಸೋ ಪ್ರಕರಣದಡಿ ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಮುರುಘಾಶ್ರೀಗಳು A-1 ಆರೋಪಿಯಾದರೆ, A- 2 ಲೇಡಿ ವಾರ್ಡನ್ ಪೊಲೀಸರ ವಶದಲ್ಲಿದ್ದಾರೆ. A-3 ಆರೋಪಿ ಮಠದ ಉತ್ತರಾಧಿಕಾರಿ ಬಸವಾದಿತ್ಯ , A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಲುಕ್‌ಔಟ್ ನೋಟಿಸ್ ಜಾರಿಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರಿಂದ ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದರು.
ಇದರ ಬೆನ್ನಲ್ಲಿಯೇ ಗುರುವಾರ ರಾತ್ರಿ ಮಠದಲ್ಲಿಯೇ ಇದ್ದ ಶ್ರೀಗಳನ್ನು ಬಂಧಿಸಲಾಗಿದೆ. ಈ ಹಿನ್ನೆಲೆ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಮತ್ತು ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರ ತಂಡ ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆ ಪೂರ್ಣಗೊಳಿಸಿದರು.
ಶ್ರೀಗಳನ್ನು ಬಂಧಿಸಿದ ಪೊಲೀಸರು ಅವರನ್ನು ಠಾಣೆಯತ್ತ ಕರೆದೊಯ್ಯಲಿದ್ದಾರೆ. ಅದಕ್ಕೂ ಮುನ್ನ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ ಅನ್ನೋ ಮಾಹಿತಿ ದೊರೆತಿದೆ.