Uncategorizedಬೆಂಗಳೂರುರಾಜ್ಯ
ಮೂರ್ತಿ’ ಬಿಟ್ಟು ಬೇರೆ ಯಾರೂ ತಾಳಿ ಕಟ್ಟಬಾರದು: ಹುಂಡಿಯಲ್ಲಿ ದೇವರಿಗೆ ಪತ್ರ

ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಮಾಯಮ್ಮದೇವಮ್ಮ ದೇವಸ್ಥಾನದ ಹುಂಡಿಯಲ್ಲಿ “ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು” ಎಂದು ಪ್ರೇಮಿಯೊಬ್ಬಳು ದೇವರಿಕೆ ಹರಕೆ ಕಟ್ಟಿಕೊಂಡು ಹುಂಡಿಗೆ ಚೀಟಿ ಹಾಕಿರುವುದು ಬೆಳಕಿಗೆ ಬಂದಿದೆ.
ದೇವರೆ ನನಗೆ ಹೆಣ್ಣನ್ನು ಕರುಣಿಸು ಎಂದು ಬರೆದಿದ್ದ ಪತ್ರ ಮೊನ್ನೆ ಚಾಮರಾಜನಗರದ ಚಾಮರಾಜೇಶ್ವರನ ಹುಂಡಿಯಲ್ಲಿ ಸಿಕ್ಕಿತ್ತು.
ಇದೀಗ ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು ಎಂದು ಪ್ರೇಮಿಯೊಬ್ಬಳು ಹುಂಡಿಗೆ ಚೀಟಿಯನ್ನು ಹಾಕಿರುವುದು ಕುತೂಹಲ ಕೆರಳಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿರುವ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪರಿವಾರ ದೇವರುಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ವೇಳೆ ಮಗನ ಇಡೀ ಬದುಕನ್ನೇ ಬದಲಿಸಪ್ಪಾ ಎಂದು ಪತ್ರ ಬರೆದು ಹುಂಡಿಗೆ ಹಾಕಿರುವ ಪತ್ರ ವೈರಲ್ ಆಗಿತ್ತು.