Uncategorized
ಮೇಕೆದಾಟು ವಿಚಾರವಾಗಿ ಮತ್ತೆ ಖ್ಯಾತೆ ತೆಗೆದು ಮೋದಿಗೆ ಪತ್ರ ಬರೆದ ಸಿಎಂ ಸ್ಟಾಲಿನ್

ಮೇಕೆದಾಟು ವಿಚಾರವಾಗಿ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ಈ ಸಂಬಂಧ ಪ್ರಧಾನಿ ನರೇಂದ್ರಮೋದಿಗೆ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪತ್ರ ಬರೆದಿದ್ದಾರೆ.
ಜೂನ್ 17ರಂದು ನಡೆಯಲಿರುವ ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಚರ್ಚಿಸದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಬೇಕು ಎಂದು ಪತ್ರದ ಮೂಲಕ ಅವರು ಮನವಿ ಮಾಡಿದ್ದಾರೆಕಾವೇರಿ ನೀರು ನಿರ್ವಹಣಾ ಪ್ರಾಕಾರದ ಕಾರ್ಯ ಚಟುವಟಿಕೆಯ ವ್ಯಾಪ್ತಿಯು ಸುಪ್ರೀಂಕೋರ್ಟ್ ನಿರ್ದೆಶನಗಳನ್ನು ಪಾಲಿಸುವ ಮಿತಿಯನ್ನು ಮಾತ್ರ ಹೊಂದಿದೆ.
ಬೇರೆ ವಿಷಯಗಳನ್ನು ಪ್ರಾಧಿಕಾರ ಪರಿಗಣಿಸುವಂತಿಲ್ಲ.ಮೇಕೆದಾಟು ಸಂಬಂಧ ತಮಿಳುನಾಡಿನ ಹಲವು ಅರ್ಜಿಗಳು ವಿಚಾರಣೆ ಹಂತದಲ್ಲಿದೆ.
ಹಾಗಾಗಿ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ಈ ವಿಷಯದ ಬಗ್ಗೆ ಯಾವುದೇ ಚರ್ಚೆ ಮಾಡದಂತೆ ಪ್ರಾಧಿಕಾರಕ್ಕೆ ಸಲಹೆ ನೀಡುವಂತೆ ಜಲಶಕ್ತಿ ಸಚಿವಾಲಯಕ್ಕೆ ಸೂಚನೆ ನೀಡಬೇಕೆಂದು ಎಂದು ಸ್ಟಾಲಿನ್ ಪತ್ರದಲ್ಲಿ ಕೋರಿದ್ದಾರೆ.