Uncategorized

ಮೈಕ್ ತೆರವು ಮಾಡದೆ ಇರುವವರ ಮೇಲೆ ಗುಂಡಿಕ್ಕಲಾಗುವುದು : ಮುತಾಲಿಕ್

ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‍ಗಳನ್ನು ತೆರವುಗೊಳಿಸದ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ ಸಾರಿದ್ದು, ಬಿಜೆಪಿ ಶಾಸಕರ ಕಚೇರಿ ಮುಂದೆ ಧರಣಿ ಮಾಡಲಾಗುವುದು.

ಮೈಕ್ ತೆರವು ಮಾಡದೆ ಇರುವವರ ಮೇಲೆ ಗುಂಡಿಕ್ಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ.

ಆದರೆ, ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ ಶಬ್ದ ಶುರುವಾಗುತ್ತದೆ.

ಇದು ನ್ಯಾಯಾಲಯ ಆದೇಶ ಉಲ್ಲಂಘನೆಯಾಗುತ್ತದೆ. ದಿನದ ಐದು ಬಾರಿ ಮಸೀದಿಗಳಲ್ಲಿನ ಪ್ರಾರ್ಥನೆ ಶಬ್ಧ ಕಿರಿಕಿರಿಯುಂಟಾಗುತ್ತಿದೆ ಎಂದರು.

ಈ ಬಗ್ಗೆ ಶ್ರೀರಾಮಸೇನೆ ಹೋರಾಟ ಶುರು ಮಾಡಲು ಅಣಿಯಾಗುತ್ತಿದೆ. ನಮಗೆ ಪ್ರಾರ್ಥನೆ ಮಾಡಲು ಅಭ್ಯಂತರವಿಲ್ಲ.

ಆದರೆ, ಶಬ್ದಕ್ಕೆ ನಮ್ಮ ತಕರಾರು ಇದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕುತ್ತೇವೆ.

ಅನೇಕ ಮುಸ್ಲಿಂ ದೇಶಗಳಲ್ಲಿಯೇ ಮಸೀದಿಗಳ ಮೈಕ್ ತೆಗೆಯಲಾಗಿದೆ. ಆದರೆ, ಇಲ್ಲಿ ಮಾತ್ರ ಕಾನೂನು ಪಾಲನೆಯಾಗುತ್ತಿಲ್ಲ ಎಂದು ಕಿಡಿಕಾರಿದರು.

ಸರ್ಕಾರ ಕೇವಲ ಮಾತಿನಲ್ಲಿಯೇ ಕಾಲಹರಣ ಮಾಡುತ್ತಿದೆ. ನಮ್ಮ ಹಿಂದುಗಳ ಮತಗಳ ಮೂಲಕ ಅಕಾರಿಕ್ಕೆ ಬಂದಿದೆ.

ಆದರೆ ಅಧಿಕಾರಕ್ಕೆ ಬಂದ ನಂತರ ಯಾವುದೇ ರೀತಿಯ ಹಿಂದೂಗಳ ರಕ್ಷಣೆಯಾಗುತಿಲ್ಲ ಎಂದು ಕಿಡಿಕಾರಿದರು.ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ನಿಂತಿಲ್ಲ: ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ನಿಂತಿಲ್ಲ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲಿ ಭೀತಿಯಿಂದ ನೂರಾರು ಹಿಂದೂ ಕುಟುಂಬಗಳು ಕಾಶ್ಮೀರ ತೊರೆದಿವೆ. ಕುಲ್ಗಾಮ್ ಜಿಲ್ಲಾಯಲ್ಲಿ ಕಾಶ್ಮೀರಿ ಪಂಡಿತ (ಹಿಂದೂ) ಶಿಕ್ಷಕಿ ರಜನಿ ಬಲ್ಲಾ (36) ಅವರನ್ನು ಉಗ್ರರು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಇದರ ಬೆನ್ನಲ್ಲೇ ಹಿಂದೂ ಕುಟುಂಬಗಳು ಕಾಶ್ಮೀರ ತೊರೆಯಲಾರಂಭಿಸಿವೆ.ಕಾಶ್ಮೀರದ ಬಾರಮುಲ್ಲೇ ಪ್ರದೇಶದಲ್ಲಿ ವಾಸಿಸುತ್ತಿರುವ 300 ಹಿಂದೂ ಕುಟುಂಬಗಳ ಪೈಕಿ ಅರ್ಧಕ್ಕೂ ಹೆಚ್ಚು ಬಳಿಕ ಆ ಪ್ರದೇಶ ತೊರೆದಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಹತ್ಯೆಯಿಂದ ಅವರು ಭೀತರಾಗಿದ್ದಾರೆ. ಸರ್ಕಾರದ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ.

ಇನ್ನು ಕಾಶ್ಮೀರ ಚಲೋ ಆರಂಭಿಸಬೇಕಾಗುತ್ರದೆ ಎಂದರು. ಕಾಶ್ಮೀರದ ಹೊರಭಾಗದಲ್ಲಿ ನಮಗೆ ಪುನರ್ವಸತಿ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆವೆ ಎಂದರು.

ಕಾಶ್ಮೀರಿ ಪಂಡಿತರ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button