ರಾಜ್ಯ

ಯುಪಿಎ ಆಡಳಿತದಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸಾಧಾರಣ ಪ್ರತಿಭೆ.ಆದರೆ, ಕಾಂಗ್ರೆಸ್ ನೇತೃತ್ವದ ಯುಪಿಎ ಅವಧಿಯಲ್ಲಿ ಭಾರತದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು ಎಂದು ಇನ್ಫೋಸಿಸ್‌ನ ಸಂಸ್ಥಾಪಕ ಅಧ್ಯಕ್ಷ ಎನ್.ಆರ್.ನಾರಾಯಣ ಮೂರ್ತಿ ಹೇಳಿದ್ದಾರೆ.

ಇಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಕ್ಯಾಂಪಸ್‌ನಲ್ಲಿ ಯುವ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಯಾವುದೇ ನಿರ್ಧಾರಗಳನ್ನೇ ಕೈಗೊಳ್ಳುತ್ತಿರಲಿಲ್ಲ ಕಿಡಿಕಾರಿದ್ದಾರೆ೨೦೦೮-೨೦೧೨ರ ಅವಧಿಯಲ್ಲಿ ನಾನು ಲಂಡನ್‌ನ ಎಚ್‌ಎಸ್‌ಬಿಸಿ ಬ್ಯಾಂಕ್‌ನ ಮಂಡಳಿ ಸದಸ್ಯನಾಗಿದ್ದೆ.

ಆಗ ಮೊದಲಿನ ಕೆಲ ವರ್ಷ, ಸಭೆಗಳಲ್ಲಿ ಚೀನಾದ ಹೆಸರನ್ನು ೨-೩ ಬಾರಿ ಪ್ರಸ್ತಾಪಿಸಿದರೆ, ಭಾರತದ ಹೆಸರು ಕೇವಲ ಒಂದು ಬಾರಿ ಪ್ರಸ್ತಾಪವಾಗುತ್ತಿತ್ತು. ಆದರೆ ದುರದೃಷ್ಟವಶಾತ್ ನಂತರದ ವರ್ಷದಲ್ಲಿ ಏನಾಯಿತೋ ಗೊತ್ತಿಲ್ಲ.ಮನಮೋಹನ್‌ಸಿಂಗ್ ಅವಧಿಯಲ್ಲಿ ದೇಶದ ಆರ್ಥಿಕತೆ ಸ್ಥಗಿತಗೊಂಡಿತ್ತು.

ಯಾವುದೇ ವಿಷಯದ ಬಗ್ಗೆಯೂ ಸರ್ಕಾರ ನಿರ್ಧಾರ ಕೈಗೊಳ್ಳುತ್ತಿರಲಿಲ್ಲ ಮತ್ತು ಪ್ರತಿಯೊಂದೂ ವಿಳಂಬವಾಗುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.೨೦೧೨ರಲ್ಲಿ ನಾನು ಎಚ್‌ಎಸ್‌ಬಿಸಿಯನ್ನು ಬಿಟ್ಟಾಗ, ಸಭೆಯಲ್ಲಿ ಭಾರತದ ಹೆಸರು ಪ್ರಸ್ತಾಪವಾಗುತ್ತಿದ್ದುದ್ದೇ ಅಪರೂಪ, ಆದರೆ ಚೀನಾದ ಹೆಸರು ಕನಿಷ್ಠ ೩೦ ಬಾರಿ ಪ್ರಸ್ತಾಪವಾಗುತ್ತಿತ್ತು.

ಹೀಗಾಗಿ, ಎಲ್ಲೆಲ್ಲಿ ಬೇರೆ ದೇಶಗಳ ಹೆಸರಲ್ಲೂ, ಅದರಲ್ಲೂ ವಿಶೇಷವಾಗಿ ಚೀನಾ ಹೆಸರು ಪ್ರಸ್ತಾಪವಾದಾಗ, ಭಾರತದ ಹೆಸರೂ ಪ್ರಸ್ತಾಪವಾಗುವಂತೆ ಮಾಡುವುದು ಈಗಿನ ಭಾರತದ ಯುವ ಸಮೂಹದ ಹೊಣೆ.

ನೀವು ಆ ಕೆಲಸ ಮಾಡುತ್ತೀರಿ ಎಂಬ ವಿಶ್ವಾಸವಿದೆ ಎಂದು ಹೇಳಿದರು.ಹಿಂದೆಲ್ಲಾ ವಿದೇಶಗಳು ನಮ್ಮನ್ನು ನೋಡುತ್ತಿದ್ದ ರೀತಿಯೇ ಬೇರೆ ಇತ್ತು. ಆದರೆ ಇದೀಗ ದೇಶಕ್ಕೆ ಒಂದು ಮಟ್ಟದ ಗೌರವ ಸಿಕ್ಕಿದೆ. ನಾವೀಗ ವಿಶ್ವದ ೫ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದ್ದೇವೆ ಎಂದು ಹೇಳಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button