ರವೀಂದ್ರ ಜಡೇಜಾ ಉಳಿಸಿಕೊಂಡು ಅಚ್ಚರಿ ಮೂಡಿಸಿದ ಚೆನ್ನೈ ಸೂಪರ್ ಕಿಂಗ್ಸ್!

ಕಳೆದ ಬಾರಿ ಗೊಂದಲಗಳ ನಂತರವೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರನ್ನು ಉಳಿಸಿಕೊಳ್ಳುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಅಚ್ಚರಿ ಮೂಡಿಸಿದೆ.ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನಲ್ಲಿ ಆಟಗಾರರನ್ನು ಉಳಿಸಿಕೊಳ್ಳುವ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ರವೀಂದ್ರ ಜಡೇಜಾ ಕೂಡ ಸ್ಥಾನ ಪಡೆದಿದ್ದಾರೆ.
ಕಳೆದ ಬಾರಿ ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ರವೀಂದ್ರ ಜಡೇಜಾಗೆ ಬಡ್ತಿ ಪಡೆದಿದ್ದರು. ಆದರೆ ಅವರ ನಾಯಕತ್ವದಲ್ಲಿ ತಂಡ ಕಳಪೆ ಪ್ರದರ್ಶನ ನೀಡಿತ್ತು. ಇದರಿಂದ ಬೇಸತ್ತ ಜಡೇಜಾ ದಿಢೀರನೆ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಜೀನಾಮೆ ನೀಡಿದ ಬೆನ್ನಲ್ಲೇ ತಂಡದಲ್ಲಿ ಕಾಣಿಸಿಕೊಳ್ಳದ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿ ಪೋಸ್ಟ್ ಗಳನ್ನು ಹಾಕಿದ್ದರು. ಅಲ್ಲದೇ ತಂಡದ ಆಡಳಿತ ಮಂಡಳಿ ವಿರುದ್ಧ ಕೂಡ ಆಕ್ರೋಶ ಹೊರಹಾಕಿದ್ದರು.ಇಷ್ಟೆಲ್ಲಾ ಮನಸ್ತಾಪದ ಹಿನ್ನೆಲೆಯಲ್ಲಿ ಜಡೇಜಾ ಅವರನ್ನು ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಉಳಿಸಿಕೊಳ್ಳುವುದು ಅನುಮಾನ ಎಂಬ ಮಾತುಗಳು ಕೇಳಿ ಬಂದಿದ್ದವು.
ಅಲ್ಲದೇ ಫಾಫ್ ಡು ಪ್ಲೆಸಿಸ್ ಬದಲು ಜಡೇಜಾ ಅವರನ್ನು ಆರ್ ಸಿಬಿಗೆ ಬಿಟ್ಟುಕೊಡುವ ಮಾತುಕತೆ ನಡೆದಿದೆ ಎಂದು ಹೇಳಲಾಗಿತ್ತು.ಆದರೆ ಚೆನ್ನೈ ಸೂಪರ್ ಕಿಂಗ್ಸ್ ಆಡಳಿತ ಮಂಡಳಿ ರವೀಂದ್ರ ಜಡೇಜಾ ಅವರನ್ನು ತಂಡದಲ್ಲಿ ಉಳಿಸಿಕೊಂಡಿದೆ.
ಅಲ್ಲದೇ ಇದು 8ನೇ ಅದ್ಭುತ. ನಮ್ಮ ಜೊತೆಗೆ ಇರಿ ಎಂದು ಟ್ವೀಟ್ ಮಾಡಿ ಅಚ್ಚರಿ ಮೂಡಿಸಿದೆ.