ಅಪಘಾತ
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಮೂವರು ದುರ್ಮರಣ

ವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಾಯಗೊಂಡ ದಾರುಣ ಘಟನೆ ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಗಾಂಧಿ ವೃತ್ತದ ಕಡೆಗೆ ಹೋಗುವಾಗ ವೇಗವಾಗಿ ಬಂದ ಕಾರೊಂದು ಪ್ರವಾಸಿ ಮಂದಿರದ ಮುಂಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಚಾಲಕ ಮನು ಸೇರಿದಂತೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.ಗಾಯಗೊಂಡಿರುವ ಮೂವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.
ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ದೀಪಾವಳಿ ಹಬ್ಬದಂದೇ ಮೂವರು ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.