ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ, ಕ್ರೂಸರ್-ಲಾರಿ ಡಿಕ್ಕಿ, 9 ಜನ ಸ್ಥಳದಲ್ಲೇ ಸಾವು..!

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಆಫಾಘಾತ ಇಂದು ಮುಂಜಾನೆ ಸಂಭವಿಸಿದೆ. ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ .
ಲಾರಿ ಮತ್ತು ಟೆಂಪೋ ನಡುವೆ ಸಂಭವಿಸಿದ ಈ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಸಾವಿನ ಸಂಖ್ಯೆ ಹೆಚ್ಚಳವಾಗು ಸಾಧ್ಯತೆ ಇದೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ.
ಇಂದು ಮುಂಜಾನೆ ಬೆಂಗಳೂರಿನಿಂದ ರಾಯಚೂರು ಕಡೆಗೆ ಹೊರಟಿದ್ದ ಟೆಂಪೋ ಟ್ರ್ಯಾಕ್ಸ್. ಬೆಳಗಿನ ಜಾವ 4.30ರ ಸಮಯದಲ್ಲಿ ಅಪಘಾತ ಸಂಭವಿಸಿದೆ.ಮೃತರು ರಾಯಚೂರು ಜಿಲ್ಲೆಯವರಾಗಿದ್ದಾರೆ.ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ಘಟನಾ ಸ್ಥಳಕ್ಕೆ ಸ್ಥಳಕ್ಕೆ ಕಳ್ಳಂಬೆಳ್ಳ ಸಬ್ ಇನ್ಸ್ಪೆಕ್ಟರ್. ಶಿರಾ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.