
ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿರುಸು ಪಡೆದ ಮಳೆ ಮುಂದುವರೆಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ
ಜುಲೈ 12ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಇಂದು ಬೆಳಗ್ಗೆಯಿಂದ ರಿಂದ ಜುಲೈ 12ರ ಬೆಳಗ್ಗೆ 8.30ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ 205 ಮಿ.ಮೀ.ಗಿಂತಲೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ಜತೆ ಸಮುದ್ರದ ಅಬ್ಬರ ಹೆಚ್ಚಾಗಲಿದೆ. ಜುಲೈ 13 ಮತ್ತು 14 ರಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಲೆನಾಡಿನ ನಾಲ್ಕು ಜಿಲ್ಲೆಗಳ ಪೈಕಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಜುಲೈ 12ರವರೆಗೆ ಮೂರು ದಿನ ಧಾರಾಕಾರವಾಗಿ ಮಳೆ ಬೀಳಲಿದ್ದು ಆರೆಂಜ್ ಅಲರ್ಟ್ ಕೊಡಲಾಗಿದೆ. ಅಲಗಲದೆ ಜುಲೈ 14ರವರೆಗೆ ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಳೆ ಬೇಳಲಿದೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.