Uncategorized

ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

ಖಾಸಗಿ ವಾಹನಗಳು ಸರ್ಕಾರದ ಲಾಂಛನ ಮತ್ತು ಹೆಸರುಗಳನ್ನು ವಾಹನಗಳ ಮೇಲೆ ಪ್ರದರ್ಶಿಸುವುದನ್ನು ನಿರ್ಬಂಧಿಸಲಾಗಿದೆ. ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದಿದ್ದಾರೆ.

ಈ ಬಗ್ಗೆ ಕೋರ್ಟ್ ಆದೇಶ ಕೂಡ ಇದ್ದು, ಸರ್ಕಾರದ ಲಾಂಛನಗಳನ್ನು ಉಪಯೋಗಿಸದಂತೆ ಹಾಗೂ ವಾಹನಗಳ ಮೇಲೆ ನಿಗಮ, ಮಂಡಳಿ ಮತ್ತು ಸಂಸ್ಥೆಗಳ ಹೆಸರುಗಳನ್ನು ಬರೆದ ಯಾವುದೇ ತರಹದ ಫಲಕ ಅಥವಾ ಬರಹಗಳನ್ನು ಅಳವಡಿಸಬಹಾದು ಎಂದು ಸ್ಪಷ್ಟ ಆದೇಶ ಮಾಡಿದೆ. ಮಾನ್ಯ ನ್ಯಾಯಾಲಯದ ಆದೇಶದಂತೆ ಸೂಕ್ತ ಕ್ರಮ ತೆಗೆದುಕೊಂಡು, ತ್ವರಿತವಾಗಿ ಅನಧಿಕೃತ ಫಲಕಗಳನ್ನು ತೆರವುಗೊಳಿಸಲು ಮತ್ತು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಮಾಹಿತಿ ರೂಪದಲ್ಲಿ ನೀಡಲು ತಿಳಿಸಿದ್ದಾರೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button