Uncategorized

ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಪಕ್ಷದ ಅಭ್ಯರ್ಥಿಗಳನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಮತ್ತು ರಾಜಕಾರಣಿ ಜಗ್ಗೇಶ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಭಾನುವಾರದಂದು ಘೋಷಿಸಿದೆ.

ಬೆಂಗಳೂರು: ಜೂನ್ 10 ರಂದು ನಡೆಯಲಿರುವ ಮುಂಬರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಪಕ್ಷದ ಅಭ್ಯರ್ಥಿಗಳನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಮತ್ತು ರಾಜಕಾರಣಿ ಜಗ್ಗೇಶ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಭಾನುವಾರದಂದು ಘೋಷಿಸಿದೆ.

ಕರ್ನಾಟಕದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಉತ್ತರ ಪ್ರದೇಶದಿಂದ ಸೀತಾರಾಮನ್ ಅವರನ್ನು ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಘೋಷಣೆ ಹೊರಬಿದ್ದಿದೆ.ಕರ್ನಾಟಕದಲ್ಲಿನ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರನ್ನು ಭದ್ರಪಡಿಸಿಕೊಳ್ಳಲು ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆಗೂ ಮುನ್ನ ಹೇಳಿದ್ದಾರೆ.

ವಿಧಾನಸಭೆಯಲ್ಲಿನ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಪಕ್ಷವು ಈಗ ನಾಲ್ಕು ಸ್ಥಾನಗಳಲ್ಲಿ ಇಬ್ಬರನ್ನು ಅಭ್ಯರ್ಥಿಗಳನ್ನು ಘೋಷಿಸಿದೆ, ಇನ್ನೊಂದೆಡೆಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ಆದರೆ, ಶಾಸಕಾಂಗ ಸಭೆಯಲ್ಲಿ ಯಾವುದೇ ಪಕ್ಷಗಳಿಗೆ ಮತ್ತೊಬ್ಬ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡುವ ಶಕ್ತಿ ಇಲ್ಲದ ಕಾರಣ ನಾಲ್ಕನೇ ಸ್ಥಾನದ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ.

ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ಬೊಮ್ಮಾಯಿ, ಮೂರನೇ ಸ್ಥಾನಕ್ಕೆ ಪಕ್ಷಕ್ಕೆ ಹೆಚ್ಚುವರಿ ಮತಗಳ ಅಗತ್ಯವಿದೆ. ಹಾಗಾಗಿ ಮೂರನೇ ಸ್ಥಾನಕ್ಕೆ ಹೇಗೆ ಮುಂದುವರಿಯಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ.ಚುನಾವಣೆಗೂ ಮುನ್ನ ಎರಡು ಪಕ್ಷಗಳು ಕೈಜೋಡಿಸಿದರೆ ಮಾತ್ರ ಮೂರನೇ ಅಭ್ಯರ್ಥಿ ಆಯ್ಕೆ ಸಾಧ್ಯ ಎಂದು ಹೇಳಿದ್ದಾರೆ. ‘ಯಾರು ಯಾರೊಂದಿಗೆ ಮಾತುಕತೆ ನಡೆಸುತ್ತಾರೆ ಎಂಬುದನ್ನು ನಾವು ಕಾದು ನೋಡುತ್ತೇವೆ, ಈಗ ಇನ್ನೂ ಯಾವುದೂ ಅಂತಿಮಗೊಂಡಿಲ್ಲ, ರಾಜ್ಯ ನಾಯಕತ್ವವು ಪಕ್ಷದ ವರಿಷ್ಠರಿಗೆ ರಾಜ್ಯದಲ್ಲಿನ ಬೆಳವಣಿಗೆಗಳನ್ನು ತಿಳಿಸಿದೆ’ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ NCIB TIMES ನ್ಯೂಸ್ ವೆಬ್ ನ್ಯೂಸ್ ಗೆ ಭೇಟಿ ಮಾಡಿ

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button