ಅಪಘಾತಬೆಂಗಳೂರುರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ರೈತ ಸಾಲುಮರದ ವೀರಾಚಾರ್ ನೇಣಿಗೆ ಶರಣು

ದಾವಣಗೆರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಸಾಲುಮರದ ವೀರಾಚಾರ್ (70) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ ಮತ್ತು ಹರಿಹರ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಲುಮರದ ನೆಟ್ಟು ಪೋಷಿಸುತ್ತಿದ್ದ ಅವರ ಪರಿಸರ ಕಾಳಜಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಮಿಟ್ಲಕಟ್ಟೆ ನ್ಯಾಯಬೆಲೆ ಅಂಗಡಿ ವಿಚಾರವಾಗಿ ಗ್ರಾಮಸ್ಥರೊಡವಗೂಡಿ ಹಲವಾರು ಬಾರಿ ಹೋರಾಟ ನಡೆಸಿದ್ದರು. ನ್ಯಾಯಬೆಲೆ ಅಂಗಡಿಯನ್ನು ಬೇರೆಯವರಿಗೆ ವಹಿಸಬೇಕು ಅವರ ಒತ್ತಾಯವಾಗಿತ್ತು.

ಆದರೆ, ಈಡೇರಲಿಲ್ಲ ಎಂಬ ಕಾರಣಕ್ಕೆ ಮನನೊಂದು ಸೋಮವಾರ ತಡರಾತ್ರಿ ಗ್ರಾಮದ ಮಧ್ಯ ದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲುಮರದ ವೀರಾಚಾರ್ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೇಡಿಕೆಗೆ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ನ್ಯಾಯ ಒದಗಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಸಾಲು ಮರಗಳನ್ನು ಬೆಳೆಸಿ ಪೋಷಿಸಿದ್ದ ಪರಿಸರ ಪ್ರೇಮಿಗೆ ಈ ಹಿಂದೆ ರಾಜ್ಯ ಸರ್ಕಾರ ರಾಜೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇತ್ತೀಚೆಗೆ ಇವರು ಮಿಟ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದರು.

ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಸೂಕ್ತವಾಗಿ ಅಕ್ಕಿ ವಿತರಣೆಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ನಿನ್ನೆ (ಸೋಮವಾರ) ಇದೇ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯ ಬೆಲೆ ಅಂಗಡಿ ರದ್ದು ಮಾಡಬೇಕೇ, ಬೇಡವೇ? ಎಂಬ ಬಗ್ಗೆ ಚರ್ಚೆ ನಡೆದಿತ್ತು.

ಇತ್ತೀಚೆಗಿನ ಘಟನಾವಳಿಗಳಿಂದ ತೀವ್ರವಾಗಿ ಮನನೊಂದಿದ್ದ ವೀರಾಚಾರಿ ನ್ಯಾಯಾಲಯ, ಜನರು ಮತ್ತು ದೇವರಲ್ಲಿಯೂ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುವೆ ಎಂದು ಹೇಳಿದ್ದರು.

ಅದರಂತೆಯೇ ನಿನ್ನೆ ರಾತ್ರಿ 2 ಗಂಟೆಗೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ ವೀರಾಚಾರಿ ದಾವಣಗೆರೆ ಜಿಲ್ಲೆಯಲ್ಲಿ ಚಿರಪರಿಚಿತರು.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button