ರಾಹುಲ್‌ಗೆ ಇಡಿ ಪ್ರಶ್ನೆಗಳ ಸುರಿಮಳೆ

ದೇಶದ್ಯಾಂತ ಭಾರಿ ಸಂಚಲನ ಸೃಷ್ಟಿಸಿರುವ ನ್ಯಾಷನಲ್ ಹೆರಾಲ್ಡ್ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.
ಇಲ್ಲಿನ ಕೇಂದ್ರ ಭಾಗದಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಧಾನಿ ಕಚೇರಿಗೆ ಬೆಳಿಗ್ಗೆ ೧೧ ಗಂಟೆ ವೇಳೆಗೆ ಹಾಜರಾದರು. ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಸಹೋದರಿ ಪ್ರಿಯಾಂಕಾ ಗಾಂಧಿ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಹಾಗೂ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸೇರಿದಂತೆ ಪ್ರಮುಖ ನಾಯಕರು ರಾಹುಲ್ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿಯವರಿಗೆ ಇಡಿ ಅಧಿಕಾರಿಗಳು ಪ್ರಮುಖವಾಗಿ ೫ ಪ್ರಶ್ನೆಗಳನ್ನು ಕೇಳಿ ಉತ್ತರ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೀವು ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಿದ್ದೀರಿ. ನೀವು ಯಾವ್ಯಾವ ಬ್ಯಾಂಕ್ ನಲ್ಲಿ ಹೊಂದಿದ್ದೀರಿ. ನೀವು ವಿದೇಶದಲ್ಲಿ ಯಾವುದೇ ಖಾತೆ ಬ್ಯಾಂಕ್‌ಗಳನ್ನು ಹೊಂದಿದ್ದೀರಾ. ಹೌದು ಎಂದಾದರೆ ಮಾಹಿತಿ ತಿಳಿಸಿ. ನಿಮ್ಮ ಆಸ್ತಿಗಳು ಎಲ್ಲಿದೆ? ನೀವು ವಿದೇಶದಲ್ಲಿ ಆಸ್ತಿ ಹೊಂದಿದ್ದೀರಾ, ಹೌದು ಎಂದಾದರೆ, ಈ ಬಗ್ಗೆ ವಿವರಗಳನ್ನು ನೀಡುವಂತೆ ರಾಹುಲ್ ಗಾಂಧಿಯವರಿಗೆ ಸೂಚಿಸಿದ್ದಾರೆ.
ನಂತರ ಅವರ ಹೇಳಿಕೆಗಳನ್ನು ಅಧಿಕಾರಿಗಳು ದಾಖಲು ಮಾಡಿಕೊಂಡಿದ್ದಾರೆ.ಪಾದಯಾತ್ರೆ ನಡೆಸದಂತೆ ಪೊಲೀಸರು ನಿಷೇಧಾಜ್ಞೆ ವಿಧಿಸಿದ್ದರೂ ಕಾಂಗ್ರೆಸ್ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಕಾರ್ಯಕರ್ತರು ನಾಯಕರು ಪ್ರತಿಭಟನೆ ನಡೆಸಲು ಮುಂದಾದರು.
ಈ ವೇಳೆ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಸಿಟ್ಟು ಹೊರ ಹಾಕಿದರು.ಪೋಲಿಸರು ಮತ್ತು ಕಾರ್ಯಕರ್ತರು ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆದು ನಾಟಕೀಯ ವಿದ್ಯಮಾನಕ್ಕೆ ಕಾರಣವಾಯಿತು.
ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಆದರೂ ರಾಹುಲ್ ಗಾಂಧಿಯವರು ಪಾದಯಾತ್ರೆ ಮೂಲಕ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದರು.
ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಪೊಲೀಸರು ವೇಣುಗೋಪಾಲರ ಅಂಗಿಯನ್ನು ಹರಿದಿದ್ದರಿಂದ ಅಸ್ವಸ್ಥಗೊಂಡಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರೀಯ ಅಧಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಒತ್ತಡದ ತಂತ್ರ ಅನುಸರಿಸಿ, ಸೇಡಿನ ರಾಜಕಾರಣ ಮಾಡುತ್ತಿವೆ ಎಂದು ಪಕ್ಷದ ಮುಖಂಡರು ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಯಂಗ್ ಇಂಡಿಯಾ ಲಿಮಿಟೆಡ್ ಪತ್ರಿಕೆಯಲ್ಲಿ ನಡೆದಿತ್ತು ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಜಾರಿ ನಿರ್ದೇಶನಾಲಯ ಪತ್ರಿಕೆಯ ಪ್ರಮುಖ ಪಾಲುದಾರರಾದ ರಾಹುಲ್ ಮತ್ತು ಸೋನಿಯಾ ಅವರ ಕೊರಳಿಗೂ ಸುತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿಗೊಳಿಸಿತ್ತು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಖಜಾಂಚಿ ಪವನ್ ಬನ್ಸಾಲ್ ಅವರನ್ನು ವಿಚಾರಣೆಗೆ ಗುರಿಪಡಿಸಿತ್ತು.
ರಾಹುಲ್‌ಗೆ ೫ ಪ್ರಶ್ನೆಗಳುನೀವು ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಿದ್ದೀರಿನೀವು ಯಾವ್ಯಾವ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದೀರಿನೀವು ವಿದೇಶದಲ್ಲಿ ಯಾವ ಬ್ಯಾಂಕ್ ಖಾತೆಯನ್ನು ಹೊಂದಿದ್ದೀರಾಹೌದು ಎಂದಾದರೆ ಅದರ ಮಾಹಿತಿನಿಮ್ಮ ಆಸ್ತಿಗಳು ಎಲ್ಲಿವೆ? ನೀವು ವಿದೇಶದಲ್ಲಿ ಆಸ್ತಿ ಹೊಂದಿದ್ದೀರಾ ಆ ಬಗ್ಗೆ ವಿವರ ನೀಡಿ.