ರಾಜಕೀಯ

ರೆಡ್ಡಿ ಹೊಸ ಪಕ್ಷ ಬಿಜೆಪಿ ಮೇಲೆ ಪರಿಣಾಮ ಬೀರುವುದಿಲ್ಲ : ಶ್ರೀರಾಮುಲು

ಬಿಜೆಪಿ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಮಾಜಿ ಸಚಿವ ಜನಾರ್ಧನ್ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಿರುವುದು ಯಾವುದೆ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಡಿದ ಅವರು, ಜನಾರ್ಧನ್ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ರೆಡ್ಡಿ ಅವರುಬುದ್ದಿವಂತರು, ಅನುಭವಸ್ಥ ಇದ್ದಾರೆ. ಅವರ ಪ್ರಾಣ ಸ್ನೇಹಿತನಾಗಿ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದರು.ಶ್ರೀರಾಮುಲುಗೆ ಧರ್ಮ ಸಂಕಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಾಲ್ಕು ಬಾರಿ ಶಾಸಕ, ಸಂಸದ, ಸಚಿವನಾಗಿದ್ದೇನೆ.

ಸಿದ್ದಾಂತದ ಮೇಲೆ ರಾಜಕೀಯ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.ಹಿರಿಯ ನಾಯಕರು ಮತ್ತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಮತ್ತೆ ಅವಕಾಶ ಸಿಕ್ಕರೆ ಮಾತನಾಡುತ್ತೇನೆ.

ಬೊಮ್ಮಾಯಿ ಮಂತ್ರಿ ಮಂಡಲದಲ್ಲಿ ಸಚಿವನಾಗಿದ್ದೇನೆ. ನಮ್ಮ ಉದ್ದೇಶ ಕಾಂಗ್ರೆಸ್ ಮುಕ್ತ ಆಗಬೇಕು. 2023ಕ್ಕೆ ಮತ್ತೆ ಬಿಜೆಪಿ ಪಕ್ಷ ಆಡಳಿತಕ್ಕೆ ಬರಬೇಕಷ್ಟೇ ಎಂದು ಹೇಳಿದರು.ನಾನು ವಾದ ಮಾಡುವುದಿಲ್ಲ.

ಒಳ್ಳೆಯದು ಕೆಟ್ಟದ್ದರ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮದು ರಾಷ್ಟ್ರೀಯ ರಾಜಕೀಯ ಪಕ್ಷ. ಸಿದ್ದಾಂತ ಮೇಲೆ ನಾವು ರಾಜಕೀಯ ಮಾಡುತ್ತೇವೆ ಎಂದು ಹೇಳಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button