ಲಂಕಾ ನೌಕಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ

ಶ್ರೀಲಂಕಾದ ನೌಕಾಪಡೆಯು ಆರು ಭಾರತೀಯ ಮೀನುಗಾರರನ್ನು ಬಂಧಿಸಿದೆ ಮತ್ತು ದೇಶದ ಪ್ರಾದೇಶಿಕ ನೀರಿನಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಿ ಅವರ ದೋಣಿಗಳನ್ನು ವಶಪಡಿಸಿಕೊಂಡಿದೆ.
ಮನ್ನಾರ್ ದ್ವೀಪದ ವಾಯುವ್ಯ ಕರಾವಳಿಯಲ್ಲಿರುವ ವಸಾಹತು ಪ್ರದೇಶವಾದ ತಲೈಮನ್ನಾರ್‍ನಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ತಲೈಮನ್ನಾರ್‍ನಲ್ಲಿ ನೌಕಾಪಡೆಯ ವಶದಲ್ಲಿರುವ ಮೀನುಗಾರರನ್ನು ಮನ್ನಾರ್‍ನಲ್ಲಿರುವ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.
ಕಳೆದ ಆಗಸ್ಟ್ 22 ರಂದು ಅಕ್ರಮ ಮೀನುಗಾರಿಕೆ ಆರೋಪದ ಮೇಲೆ 10 ಭಾರತೀಯ ಮೀನುಗಾರರನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಆರು ಮೀನುಗಾರರನ್ನು ಬಂಧಿಸಲಾಗಿದೆ. ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ.
ಲಂಕಾ ನೌಕಾಪಡೆಯ ಸಿಬ್ಬಂದಿ ಪಾಕ್ ಜಲಸಂಯಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ್ದಾರೆ ಮತ್ತು ತಮ್ಮ ಜಲ ವ್ಯಾಪ್ತಿಯಲ್ಲಿ ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಹಲವಾರು ಭಾರತೀಯರನ್ನು ಬಂಧಿಸಲಾಗುತ್ತಿದೆ.
ಪಾಕ್ ಜಲಸಂಯು ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸುವ ನೀರಿನ ಕಿರಿದಾದ ಪಟ್ಟಿಯಾಗಿದ್ದು, ಎರಡೂ ದೇಶಗಳ ಮೀನುಗಾರರಿಗೆ ಪ್ರಮುಖ ಮೀನುಗಾರಿಕಾ ಕೇಂದ್ರವಾಗಿದೆ.