
ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿ ನಾಗೇಶನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬೆಂಗಳೂರು: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಪ್ರೀತಿಸಿದ ಹುಡುಗಿಯ ಮೇಲೆ ಆಸಿಡ್ ದಾಳಿ ಮಾಡಿರುವ ಅಮಾನುಷ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ. 23 ವರ್ಷದ ಸಂತ್ರಸ್ಥೆಯ ಮೇಲೆ ಸುಂಕದಕಟ್ಟೆಯ ಮುತ್ತೂಟ್ ಫಿನ್ಕಾರ್ಪ್ ಬಳಿ ಹುಚ್ಚು ಪ್ರೇಮಿಯೊಬ್ಬ ಆಸಿಡ್ ಎರಚಿದ್ದಾನೆ. ಆರೋಪಿಯನ್ನು ನಾಗೇಶ್ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ನಾಗೇಶ್ ಎಂಬ ವ್ಯಕ್ತಿ ಯುವತಿಯನ್ನು ಹಲವು ವರ್ಷಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ. ಎಲ್ಲಿ ಹೋದರೂ ಹಿಂದೆಯೇ ಸುತ್ತುತ್ತಿದ್ದ. ಹುಡುಗಿ ತನಗೆ ಇಷ್ಟವಿಲ್ಲ ಎಂದು ಎಷ್ಟು ಬಾರಿ ಹೇಳಿದರೂ ಕೇಳಲು ನಾಗೇಶ್ ಸಿದ್ಧನಿರಲಿಲ್ಲ. ಕಡೆಯ ಬಾರಿಗೆ ಪ್ರೀತಿಸುತ್ತೀಯಾ ಇಲ್ಲವಾ ಎಂದು ಅವಾಜ್ ಹಾಕಿದ್ದಾನೆ. ಹುಡುಗಿ ನಿರಾಕರಿಸಿದಾಗ ಆಸಿಡ್ ಎರಚಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ವೈದ್ಯರು ಒಂದು ವಾರ ಯುವತಿಯನ್ನು ಅಬ್ಸರ್ವೇಷನ್ ನಲ್ಲಿ ಇಟ್ಟಿದ್ದಾರೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡಿರುವ ಆರೋಪಿ ನಾಗೇಶನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.