ರಾಜ್ಯ
ಲಾಲೂ ಪ್ರಸಾದ್ ಯಾದವ್ ಗೆ ಕಿಡ್ನಿ ದಾನ ಮಾಡಲಿರುವ ಪುತ್ರಿ ರೋಹಿಣಿ

ಅನಾರೋಗ್ಯದಿಂದ ಬಳಲುತ್ತಿರುವ ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಗೆ ಪುತ್ರಿ ರೋಹಿಣಿ ಆಚಾರ್ಯ ಕಿಡ್ನಿ ದಾನ ಮಾಡಲಿದ್ದಾರೆ.ರಾಷ್ಟ್ರೀಯ ಜನತಾದಳದ ಮುಖ್ಯಸ್ಥರಾಗಿರುವ 74 ವರ್ಷದ ಲಾಲೂ ಪ್ರಸಾದ್ ಯಾದವ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ವಾರವಷ್ಟೇ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು.
ಲಾಲೂ ಪ್ರಸಾದ್ ಯಾದವ್ ಹಲವಾರು ದೈಹಿಕ ಸಮಸ್ಯೆಗಳಿಂದ ಎದುರಿಸುತ್ತಿದ್ದು, ವೈದ್ಯರು ಕಿಡ್ನಿ ಬದಲಾವಣೆಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಸಿಂಗಾಪುರದಲ್ಲಿ ನೆಲೆಸಿರುವ ಪುತ್ರಿ ರೋಹಿಣಿ ಆಚಾರ್ಯ ಕಿಡ್ನಿ ನೀಡಿ ಜೀವದಾನ ನೀಡಲು ಮುಂದಾಗಿದ್ದಾರೆ.