
ವಾರದಲ್ಲಿ ಮೂರು ದಿನ ಮೈಸೂರು ಮತ್ತು ಹುಬ್ಬಳ್ಳಿ ನಡುವೆ ವಿಮಾನಯಾನ ಸೇವೆಗೆ ಚಾಲನೆ ನೀಡಲಾಯಿತು. ಮೈಸೂರು ಸಮೀಪದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ ವಿಮಾನ ಸೇವೆಗೆ ಚಾಲನೆ ನೀಡಲಾಗಿದ್ದು, ಇದಕ್ಕೆ ಮೂಲ ಕಾರಣೀಭೂತರಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಧನ್ಯವಾದ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಮಹಾಪೌರರಾದ ಸುನಂದಾ ಪಾಲನೇತ್ರ, ಸಂಸದ ಪ್ರತಾಪ್ ಸಿಂಹ, ಮೈಸೂರು ವಿಮಾನ ನಿಲ್ದಾಣದ ಸಲಹಾ ಸಮಿತಿ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.