ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು ; ಸಿಎಂ ಬೊಮ್ಮಾಯಿ.

ಬೆಂಗಳೂರು. ಮೇ.22-ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದ್ದು, ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಾಳೆಯಿಂದ ಒಂದುವಾರ ದಾವೂಸ ನಲ್ಲಿ ನಡೆಯುವ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಕಳೆದ ನಾಲ್ಕು ತ್ರೈಮಾಸಿಕದಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ಹೆಚ್ವು ವಿದೇಶಿ ಬಂಡವಾಳ ಬಂದಿದೆ.ಇದರಕ್ಕೆ ರಾಜ್ಯ ಮೊದಲ ಸ್ಥಾನದಲ್ಲಿದೆ.ಹಾಗಾಗಿ ನಮಗೆ ಹೆಚ್ಚು ಉತ್ಸಾಹ ಇದೆ ಎಂದರು.ಇನ್ನೂ ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ.ವಿಶೇಷವಾಗಿ ನವೆಂಬರ್ ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟ ಮೀಟ್ ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು. ಈ ಎಲ್ಲ ಪ್ರಕಿಯೆಗಳ ಮಧ್ಯೆ ದೇಶ ಮತ್ತು ವಿದೇಶಗಳ ಹಲವಾರು ಕೈಗಾರಿಕೆಗಳು ರಾಜ್ಯದಲ್ಲಿ ಸ್ಥಾಪನೆಗೊಳ್ಳಲಿವೆ ಎಂದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ,ಗಣಿಖಾತೆ ಸಚಿವ ಸಿ.ಸಿ.ಪಾಟೀಲ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಮುನಿರತ್ನ ಸಿಎಂಗೆ ಅಭಿನಂದನೆ ಸಲ್ಲಿಸಿ ಶುಭಹಾರೈಸಿದರು.