ರಾಜ್ಯ

ವಿದ್ಯಾರ್ಥಿಗಳ ಪ್ರತಿಭಟನೆ, ಬೆಂಗಳೂರು ವಿವಿ ಸ್ತಬ್ಧ

ವಿಶ್ವವಿದ್ಯಾಲಯದ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು (ಯುವಿಸಿಇ)ಕಟ್ಟಡ ನಿರ್ಮಾಣಕ್ಕೆ ವರ್ಗಾಯಿಸಲು ಕೈಗೊಂಡಿರುವ ಕ್ರಮ ಖಂಡಿಸಿ ಬೆಂಗಳೂರು ವಿವಿಯ ಸಂಶೋಧನೆ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟ ಇಂದು ಜ್ಞಾನಭಾರತಿ ಆವರಣದ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ಸಿಂಡಿಕೇಟ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು.

ಈ ವೇಳೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.ಈ ಸಂದರ್ಭದಲ್ಲಿ ಹಣಕಾಸು ಅಧಿಕಾರಿ ಕೊಠಡಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ನೀಡಲಾಗಿತ್ತು.

ಇದನ್ನು ಖಂಡಿಸಿ ಇಂದು ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕೂಡಲೇ ಹಣ ವರ್ಗಾವಣೆ ನಿರ್ಣಯವನ್ನು ಕೈ ಬಿಟ್ಟು ವಿದ್ಯಾರ್ಥಿಗಳ ವಿರುದ್ಧ ನೀಡಿರುವ ದೂರನ್ನು ಹಿಂಪಡೆಯುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಇಂದು ತರಗತಿಗಳನ್ನು ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ವಿವಿಯ 52 ವಿಭಾಗಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ವಿವಿಯ ಜ್ಞಾನಭಾರತಿ ಆವರಣ ಸಂಪೂರ್ಣ ಸ್ತಬ್ಧವಾಗಿದ್ದು, ಪೊಲೀಸರ ಸರ್ಪಗಾವಲು ಹಾಕಲಾಗಿತ್ತು.

ದೂರು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button