
ಅರಕಲಗೂಡು ವಸತಿ ಶಾಲೆಯ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ನನ್ನು ಬಂಧಿಸಲಾಗಿದೆ.
ʼಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ವಸತಿ ಶಾಲೆ ವಿದ್ಯಾರ್ಥಿನಿಯರು ದೂರು ನೀಡಿದ್ದು, ಭೇಟಿ ನೀಡಿ ಮಕ್ಕಳ ಕಲ್ಯಾಣ ಸಮಿತಿಯವರು ಪರಿಶೀಲನೆ ನಡೆಸಿದ್ದರು.
ಮಕ್ಕಳೊಂದಿಗೆ ಆಪ್ತ ಸಮಾಲೋಚನೆಯನ್ನು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ನಡೆಸಿದ್ದು, ಪ್ರಾಂಶುಪಾಲರ ಲೈಂಗಿಕ ಕಿರುಕುಳ ನೀಡಿರುವುದನ್ನು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ.ಕೋಮಲ ಪೊಲೀಸರಿಗೆ ದೂರು ನೀಡಿದ್ದು, ಪ್ರಾಂಶುಪಾಲ ಶಿವಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಮೂಲತಃ ಕೊಡಗು ಜಿಲ್ಲೆಯವರಾಗಿದ್ದು, ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.