ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಸೋರಿಕೆ

ಪಂಜಾಬ್ ಮೊಹಾಲಿಯಲ್ಲಿರುವ ಚಂಡೀಘಡ ವಿಶ್ವವಿದ್ಯಾನಿಲಯ ಬಾಲಕಿಯರ ವಸತಿ ನಿಲಯಗಳಲ್ಲಿ ಇರುವ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳನ್ನು ಸಹಪಾಠಿಯೊಬ್ಬಳು ಆನ್ ಲೈನ್ ನಲ್ಲಿ ಸೋರಿಕೆ ಮಾಡಿರುವ ಘಟನೆಗೆ ಪಂಜಾಬ್ ಸೇರಿದಂತೆ, ದೇಶದ ಇತರ ರಾಜ್ಯಗಳಲ್ಲೂ ಭಾರೀ ವಿರೋಧ ವ್ಯಕ್ತವಾಗಿದೆ.
ಪಂಜಾಬ್ ವಿವಿಯ ಹಾಸ್ಟೆಲ್ ನ ವಿದ್ಯಾರ್ಥಿನಿಯರು, ಸಹಪಾಠಿಯ ಈ ಕೃತ್ಯ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ವಿಡಿಯೋ ಹರಿಬಿಟ್ಟಿರುವ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನೆ ತಿಳಿಸಿದ್ದಾರೆ.
ಈ ಘಟನೆ ದು:ಖಕರವಾಗಿದೆ. ನಮ್ಮ ಹೆಣ್ಣುಮಕ್ಕಳು ನಮ್ಮ ಹೆಮ್ಮೆ ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಎಲ್ಲರೂ ಶಾಂತಿಯಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.
ವಿದ್ಯಾರ್ಥಿನಿಯರ ಖಾಸಗಿ ವಿಡಿಯೋಗಳು ಸಾಮಾಜಿಕ ಜಾತಾಣದಲ್ಲಿ ಹರಿದಾಡುತ್ತಿದ್ದಂತೆಯೇ ತೀರಾ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರಿಂದ ಆತ್ಮಹತ್ಯೆ ಪ್ರಯತ್ನ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಘಟನೆಗೆ ಸಂಬಂಧಿಸಿದಂತೆ, ಓರ್ವ ಪ್ರಜ್ಞೆ ತಪ್ಪಿದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಕೆ ಚೇತರಿಸಿಕೊಂಡಿರುವುದಾಗಿ ಪೊಲೀಸರು ಹಾಗೂ ವಿವಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದುವರೆಗೂ ಪೊಲೀಸರು ನಡೆಸಿದ ತನಿಖೆಯಲ್ಲಿ ವಿಡಿಯೋ ಲೀಕ್ ಮಾಡಿರುವ ಆರೋಪಿ ವಿದ್ಯಾರ್ಥಿನಿಯ ಒಂದು ವಿಡಿಯೋವನ್ನು ಮಾತ್ರ ಪೊಲೀಸರು ಪತ್ತೆಹಚ್ಚಿದ್ದಾರೆ ಹಾಗೂ ಇತರೆ ಯಾವುದೇ ವಿಡಿಯೋವನ್ನು ಆರೋಪಿ ವಿದ್ಯಾರ್ಥಿನಿ ಬಹಿರಂಗಪಡಿಸಿಲ್ಲ ಹಾಗೂ ವಿಡಿಯೋ ರೆಕಾರ್ಡ್ ಮಾಡಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈಗಾಗಲೇ ಆರೋಪಿ ವಿದ್ಯಾರ್ಥಿನಿ ಬಳಿ ಇದ್ದ ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿ ಮೊಹಾಲಿ ಪೊಲೀಸ್ ಮುಖ್ಯಸ್ಥ ವಿವೇಕ್ ಸೋನಿ ಅವರು ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ, ಸಾವುಗಳು ಅಥವಾ ಆತ್ಮಹತ್ಯೆ ಪ್ರಕರಣವನ್ನು ನಿರಾಕರಿಸಿರುವ ಅಧಿಕಾರಿ ವಿವೇಕ್ ಅವರು, ವದಂತಿಗಳಿಗೆ ಕಿವಿಕೊಡಬೇಡಿ, ಪ್ರಜ್ಞಾಹೀನವಾಗಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಯಲ್ಲಿ ನೋಡಿಕೊಳ್ಳಲಾಗುತ್ತಿದೆ.
ಆಕೆಯೊಂದಿಗೆ ಪೊಲೀಸರು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.ಚಂಡೀಘಡ ವಿವಿಯ ಕುಲಪತಿ ಡಾ. ಆರ್.ಎಸ್. ಭಾವಾ, ವಿದ್ಯಾರ್ಥಿಗಳಿಂದ ೬೦ ಆಕ್ಷೇಪಾರ್ಹ ಎಸ್ ಎಂ ಎಸ್ ಗಳು, ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೆ ಅವು ಸುಳ್ಳು ಮತ್ತು ಆಧಾರರಹಿತ ಎಂದಿರುವ ಅವರು, ಹುಡುಗಿಯೊಬ್ಬಳು ಚಿತ್ರೀಕರಿಸಿರುವ ವೈಯಕ್ತಿಕ ವಿಡಿಯೋ ಹೊರತುಪಡಿಸಿ ಯಾವುದೇ ವಿದ್ಯಾರ್ಥಿಯ ಖಾಸಗಿ ವಿಡಿಯೋಗಳು ಕಂಡುಬಂದಿಲ್ಲ.
ಆ ವಿದ್ಯಾರ್ಥಿ ಸಹ ತನ್ನ ಗೆಳೆಯನೊಂದಿಗೆ ಹಂಚಿಕೊಂಡಿದ್ದಾಳೆಂದು ತಿಳಿಸಿದ್ದಾರೆ.ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ವಿವಿ ಸ್ವಯಂಪ್ರೇರಿತವಾಗಿ ಮುಂದಿನ ತನಿಖೆ ಕೈಗೊಳ್ಳಲು ಪಂಜಾಬ್ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ, ಪೊಲೀಸರು, ಓರ್ವ ಯುವತಿಯನ್ನು ವಶಕ್ಕೆ ಪಡೆದು, ಐಟಿ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದೆ ಎಂದು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕರು, ಪಂಜಾಬ್ ಮಹಿಳಾ ಆಯೋಗದ ಅಧ್ಯಕ್ಷೆ ಮನಿಷಾ ಗುಲಾಟಿ, ಆಮ್ ಆದ್ಮಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತೀವ್ರವಾಗಿ ಖಂಡಿಸಿದ್ದಾರೆ.