ರಾಜಕೀಯ
ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಬೆಂಗಳೂರು: ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಅಂಗೀಕಾರ ಮಾಡಿದೆ.
ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗಿಕಾರಕ್ಕೆ ಸಭಾಪತಿ ಸೂಚನೆ ನೀಡಿದ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಸದನದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದೇ ವೇಳೆ ವಿಧಾನಪರಿಷತ್ ನ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.
ಸರ್ಕಾರದ ಈ ನಡೆಗೆ ಪ್ರತಿಪಕ್ಷದ ಸದಸ್ಯರು ತೀವ್ರ ಪ್ರತಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರು. ಇದೆ ವೇಳೆ ವಿಧಾನಪರಿಷತ್ ನ ಕಲಾಪವನ್ನು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಲಾಯಿತು.