
ವಿಶೇಷ ಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಗ್ರಾಮವೊಂದರ 18 ವರ್ಷದ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ವಿಷಯ ತಿಳಿದು ಯುವತಿ ಪೋಷಕರು ಆಡೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿ ಪರಶುರಾಮ ಮಡಿವಾಳ ಎಂಬಾತನನ್ನು ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣದಲ್ಲಿ ಆರೋಪಿಗೆ ಸಹಕರಿಸಿದ ಯಶವಂತ್ ಎಂಬಾತನಿಗಾಗಿ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.