ವಿಷಪೂರಿತ ಆಹಾರ ಸೇವಿಸಿ 18 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು.

ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಊಟದ ನಂತರ ಸುಮಾರು 18 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.
ತಕ್ಖವೇ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಆಹಾರ ಮತ್ತು ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಆಹಾರ ಸುರಕ್ಷತಾ ಆಯುಕ್ತರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.ಇನ್ನೂ, ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರದಲ್ಲಿರುವ ಅಂಗನವಾಡಿಯ ನಾಲ್ವರು ವಿದ್ಯಾರ್ಥಿಗಳನ್ನು ಅಸ್ವಸ್ಥತೆಯ ದೂರುಗಳ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಮೇ 2 ರಂದು ಕೇರಳದ ಕಾಸರಗೋಡು ಜಿಲ್ಲೆಯ ಚೆರುವತ್ತೂರು ಪಟ್ಟಣದ ಆಹಾರ ಮಳಿಗೆಯೊಂದರಲ್ಲಿ ‘ಕೊಳೆತ ಷಾವರ್ಮಾ’ ಸೇವಿಸಿ 17 ವರ್ಷದ ಶಾಲಾ ಬಾಲಕಿ ಸಾವನ್ನಪ್ಪಿದ್ದಳು. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.