ರಾಜ್ಯ

ಶಾಲೆಗಳಲ್ಲಿ ಹಿಜಾಬ್‌ಗೆ ಅವಕಾಶವಿಲ್ಲ ತೀರ್ಪು ಆಧಾರಿಸಿ ಕ್ರಮ : ನಾಗೇಶ್

ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪುನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ವಾಗತಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ , ಹಿಜಾಬ್ ತೀರ್ಪು ವಿವಾದ ಬಗ್ಗೆ ನೀಡಿರುವ ಸುಪ್ರೀಂಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ.

ಸದ್ಯಕ್ಕೆ ಶಾಲೆಯಲ್ಲಿ ಮಕ್ಕಳು ಹಿಜಾಬ್ ಧರಿಸಲು ಅವಕಾಶ ಇಲ್ಲವೇ ಇಲ್ಲ. ಶಾಲೆಯ ಒಳಗೆ ಹಿಜಾಬ್ ಬ್ಯಾನ್ ಮುಂದುವರಿಯಲಿದೆ. ಮುಂದಿನ ತೀರ್ಪು ಬರುವವರೆಗೆ ಹೈರ್ಕೋರ್ಟ್ ಆದೇಶ ಮುಂದುವರೆಯಲಿದೆ ಎಂದು ಹೇಳಿದರು.ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ನ್ಯಾಹೇಮಂತ್ ಗುಪ್ತಾ, ನ್ಯಾ ಸುಧಾಂಶು ಧುಲಿಯಾ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದಾರೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button