Uncategorized

ಶುಕ್ರವಾರ ರಾಶಿ ಫಲ

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ. ಹಿರಿಯರಿಂದ ಸಂತೋಷ ವೃದ್ಧಿ.

ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಗುರುಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಆರೋಗ್ಯ ಗಮನಿಸಿ.

ಕನ್ಯಾ: ಸಂತಸದಿಂದ ಕೂಡಿದ ದಿನ. ಎಲ್ಲಾ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುದಾರಣೆ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.

ತುಲಾ: ಸ್ವಂತ ಪರಿಶ್ರಮದಿಂದ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ ಇತ್ಯಾದಿ ಫ‌ಲ.

ವೃಶ್ಚಿಕ: ದೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಿಸಿ.

ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದಿ.

ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ. ಪ್ರಯಾಣ ಅವಕಾಶ ಸಂಭವ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಕಾರ್ಯಸಾಧನೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button