Uncategorized

ಸಂಚಾರ ನಿಯಮ ಉಲ್ಲಂಘಿಸಿದರೆ ಪಬ್ಲಿಕ್ ಐ ಆ್ಯಪ್‍ನಲ್ಲಿ ಮಾಹಿತಿ ನೀಡಿ

ಪಬ್ಲಿಕ್ ಐ ಆ್ಯಪ್‍ನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಫೋಟೋಗಳನ್ನು ಸೆರೆ ಹಿಡಿದವರ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.

ಆಟೋ ರಿಕ್ಷಾ ಚಾಲಕರು ಇತ್ತೀಚಿನ ದಿನಗಳಲ್ಲಿ ವಾಹನ ಚಾಲನೆ ಮಾಡುವ ವೇಳೆ ಸಮವಸ್ತ್ರ ಧರಿಸದೇ ಇರುವುದು ಹಾಗೂ ಆಟೋ ರಿಕ್ಷಾಗಳಲ್ಲಿ ಡಿಸ್‍ಪ್ಲೇ ಕಾರ್ಡ್‍ಗಳನ್ನು ಹಾಕದಿರುವ ಬಗ್ಗೆ ನಗರ ಸಂಚಾರಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಸಹ ಸಂಚಾರಿ ಪೊಲೀಸರೊಂದಿಗೆ ಕೈ ಜೋಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಆಟೋ ಚಾಲಕರು ಸಮವಸ್ತ್ರ ಧರಿಸದ ಹಾಗೂ ಡಿಸ್‍ಪ್ಲೇ ಕಾರ್ಡ್‍ಗಳನ್ನು ಹಾಕದೆ ಓಡಾಡುವ ಆಟೋ ರಿಕ್ಷಾ ಚಾಲಕರ ವಿರುದ್ಧ ಪಬ್ಲಿಕ್ ಐ ಎಂಬ ಆ್ಯಪ್ ಮೂಲಕ ನಿಯಮ ಉಲ್ಲಂಘನೆ ಮಾಡುವವರ ಕುರಿತು ಸೆರೆ ಹಿಡಿಯಬಹುದಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಿ ಪಬ್ಲಿಕ್ ಐ ಎಂಬ ಆ್ಯಪ್‍ನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button