ಸಂಪುಟ ಸೇರ್ಪಡೆ ಭರವಸೆ ಸಿಕ್ಕಿದೆ, ಸದ್ಯಕ್ಕೆ ಬೇರೆ ನಿರ್ಧಾರವಿಲ್ಲ: ಈಶ್ವರಪ್ಪ

ತಮಗೆ ಸಂಪುಟ ಸೇರ್ಪಡೆ ಭರವಸೆ ಸಿಕ್ಕಿದೆ, ಹಾಗಾಗಿ ಸಿಎಂ ಬೊಮ್ಮಾಯಿಗೆ ಥ್ಯಾಂಕ್ಸ್ ಹೇಳುವೆ. ಜಾರಕಿಹೊಳಿ ಅವರನ್ನೂ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಭರವಸೆ ಬೊಮ್ಮಾಯಿ ಅವರಿಂದ ಸಿಕ್ಕಿದೆ.
ಸದ್ಯಕ್ಕೆ ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಸಿಎಂ ಬೊಮ್ಮಾಯಿ ಈಶ್ವರಪ್ಪ ಅವರನ್ನು ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಪಕ್ಷದ ಹೈಕಮಾಂಡ್ ಜೊತೆ ಮಾತನಾಡಿರುವೆ.
ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಬಗ್ಗೆ ಕೇಂದ್ರ ನಾಯಕರು ಭರವಸೆ ನೀಡಿದ್ದಾರೆ. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಭವವಿದೆ ಎಂದು ಮಾಧ್ಯಮಗಳಿಗೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಹೀಗೆ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಹೇಳ್ತಾ ರಮೇಶ್ ಜಾರಕಿಹೊಳಿ, ಈಶ್ವರಪ್ಪ ತನಿಖೆಯಲ್ಲಿ ಕ್ಲೀನ್ ಚಿಟ್ ಪಡೆದುಕೊಂಡಿದ್ದಾರೆ. ಹೀಗಾಗಿ ಅವರಿಗೆ ಪ್ರತಿಭಟಿಸುವ ಹಕ್ಕಿದೆ ಅಂತ ಹೇಳಿದ್ದಾರೆ.
ಸಚಿವ ಸಂಪುಟದಲ್ಲಿ ಇವರಿಬ್ಬರಿಗೂ ಸ್ಥಾನ ನೀಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅವರ ತೀರ್ಮಾನಕ್ಕೆ ಸ್ವಾಗತಿಸುತ್ತೇನೆ ಎಂದಿದ್ದಾರೆ.