Uncategorized
ಸಂಯುಕ್ತಾ ಹೊರನಾಡ್ ಸಖತ್ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿರೋ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ

ಸ್ಯಾಂಡಲ್‌ವುಡ್ ಲೈಫು ಇಷ್ಟೇನೆ, ಬರ್ಫಿ, ಒಗ್ಗರಣೆ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ಸಂಯುಕ್ತಾ ಹೊರನಾಡ್ ಸಖತ್ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿರೋ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಲೈಫು ಇಷ್ಟೇನೆ ನಟಿಯ ಬೋಲ್ಡ್ ಅವತಾರ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.
ಕನ್ನಡ ಮಾತ್ರವಲ್ಲದೇ ಪರಭಾಷಾ ಚಿತ್ರಗಳಲ್ಲೂ ಬ್ಯೂಸಿಯಿರೋ ನಟಿ ಸಂಯುಕ್ತಾ ಸಿನಿಮಾಗಳಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡು ಜಾಲಿ ಮೂಡ್‌ನಲ್ಲಿದ್ದಾರೆ.
ಬ್ರೇಕ್‌ನ ನಂತರ ಮಾಲ್ಡೀವ್ಸ್‌ಗೆ ಪ್ರವಾಸಕ್ಕೆ ತೆರಳಿದ್ದಾರೆ. ರೆಡ್ ಕಲರ್ ಡ್ರೆಸ್‌ನಲ್ಲಿ ಮಿಂಚುತ್ತಾ, ಬೀಚ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಈ ಫೋಟೊ ಸದ್ಯ ಭಾರೀ ವೈರಲ್ ಆಗುತ್ತಿದೆ. ನಟಿ ಸಂಯುಕ್ತಾ ಮನೋಜ್ಞ ನಟನೆಯ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಇನ್ನು ಸಿನಿಮಾ ವಿಚಾರಕ್ಕೆ ಬರೋದಾದ್ರೆ, ಕನ್ನಡ ಮತ್ತು ತಮಿಳಿನ ಒಂದಿಷ್ಟು ಸಿನಿಮಾಗಳಲ್ಲಿ ಆಕ್ಟೀವ್ ಆಗಿದ್ದಾರೆ.