
ಮಂಡ್ಯ : ಜಿಲ್ಲೆಯ ಮಳವಳ್ಳಿಯ ಅಪ್ರಾಪ್ತ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ 65 ವರ್ಷದ ವೃದ್ದನಿಂದ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ಥೆ ಬಾಲಕಿಯ ಸಹೋದರಿ ಹಲಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಳವಳ್ಳಿ ತಾಲೂಕಿನ ಬ್ಯಾಡರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮದ ವೃದ್ದನೊಬ್ಬ ಈ ಕೃತ್ಯ ವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.ಬಾಲಕಿಗೆ ತಿಂಡಿ ಊಟ ಕೊಡಿಸುವುದಾಗಿ ಪುಲಾಯಿಸಿ ಬಸವನಹಳ್ಳಿ ಬೆಟ್ಟಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.
ಸಂತ್ರಸ್ತೆ ಬಾಲಕಿಯ ಸಹೋದರಿ ದೂರಿನ ಮೇರೆಗೆ ಆರೋಪಿ ವೃದ್ದನನ್ನ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹಲಗೂರು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಇತ್ತೀಚಿಗೆ ಮಳವಳ್ಳಿಯಲ್ಲಿ ಟ್ಯೂಷನ್ ಸೆಂಟರ್‌ನಲ್ಲಿ ಮೇಲ್ವಿಚಾರಕನಾಗಿದ್ದ ಆರೋಪಿ 52 ವರ್ಷದ ಕಾಂತರಾಜು ಪುಟ್ಟಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ, ಇದು ಮಾಸುವ ಮುನ್ನ ಮತ್ತೊಂದು ಘಟನೆ ನಡೆದಿರುವುದು ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ.