ಸಚಿವ ಈಶ್ವರಪ್ಪ ವಿರುದ್ಧ ಕಮೀಷನ್ ಆರೋಪ ಹೊರಿಸಿದ್ದ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ

ಬೆಳಗಾವಿಯ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ್ ಆಪ್ ಮೆಸೇಜ್ ಕಳುಹಿಸಿ ಸಂತೋಷ್ ನಾಪತ್ತೆಯಾಗಿದ್ದರು.
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರ ಸಂತೋಷ್ ಪತ್ರ ಬರೆದಿದ್ದ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿತ್ತು.ನನ್ನ ಸಾವಿಗೆ ಈಶ್ವರಪ್ಪರೇ ಕಾರಣ, ಡೆತ್ ನೋಟ್:
ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರೇ ಕಾರಣ ಎಂದು ಗುತ್ತಿಗೆದಾರ ಸಂತೋಷ್ ಮಾಧ್ಯಮಗಳಿಗೆ ಆತ್ಮಹತ್ಯೆ ಸಂದೇಶವನ್ನು ಕಳುಹಿಸಿ, ಉಡುಪಿಯಲ್ಲಿ
ಆತ್ಮಹತ್ಯೆಗೆ ಶರಣಾಗಿದ್ದಾರೆ ವಾಟ್ಸಾಪ್ ಮೂಲಕ
ಮೆಸೇಜ್ ಮಾಡಿರುವ ಸಂತೋಷ್, ನನ್ನ ಪತ್ನಿ, ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ,ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ. ನನ್ನ ಸಾವಿಗೆ ಸ್ನೇಹಿತರು ಕಾರಣರಲ್ಲ.ಸ್ನೇಹಿತರೊಂದಿಗೆ ನಾನು ಪ್ರವಾಸದಲ್ಲಿದ್ದ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಮೆಸೇಜ್‌ನಲ್ಲಿ
ತಿಳಿಸಿದ್ದಾರೆ.