ಸದ್ದಿಲ್ಲದೆ ಅಮೇಜಾನ್ ಪ್ರೈಮ್ ವಿಡಿಯೋಗೆ ಕಾಲಿಟ್ಟ ‘ಕೆಜಿಎಫ್ 2

ಸದ್ದಿಲ್ಲದೆ ಅಮೇಜಾನ್ ಪ್ರೈಮ್ ವಿಡಿಯೋಗೆ ಕಾಲಿಟ್ಟ ‘ಕೆಜಿಎಫ್ 2′; ಸಿನಿಮಾ ನೋಡೋಕೆ ಹಲವು ಷರತ್ತು’ಕೆಜಿಎಫ್ 2′ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಬಿಡುಗಡೆ ಆಗಿತ್ತು. ಈಗ ಒಟಿಟಿಯಲ್ಲೂ ಐದೂ ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೀವು ರೆಂಟ್ ಪಡೆಯಬಹುದು. ಇದಕ್ಕೆ 199 ರೂಪಾಯಿ ಪಾವತಿಸಬೇಕು.’ಕೆಜಿಎಫ್ 2′ ಸಿನಿಮಾ (KGF: Chapter) ಬಾಕ್ಸ್ ಆಫೀಸ್‌ನಲ್ಲಿ 1200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಬಾಲಿವುಡ್‌ನಲ್ಲಿ ಈ ಸಿನಿಮಾ 427 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಸಿನಿಮಾ ಒಟಿಟಿಯಲ್ಲಿ ಯಾವಾಗ ತೆರೆಕಾಣಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಈ ಚಿತ್ರ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವಾಗಲೇ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ (Amazon Prime Video) ಪ್ರಸಾರ ಕಂಡಿದೆ. ನೀವು ಅಮೇಜಾನ್ ಪ್ರೈಮ್ ವಿಡಿಯೋ ಚಂದಾದಾರರಾದರೆ ಈ ಸಿನಿಮಾವನ್ನು ವೀಕ್ಷಿಸುವುದಕ್ಕೆ ಸಾಧ್ಯವಿಲ್ಲ! ಈ ಸಿನಿಮಾ ನೋಡಬೇಕು ಎಂದರೆ ನೀವು ಹೆಚ್ಚುವರಿಯಾಗಿ ಹಣ ಪಾವತಿಸಬೇಕು.’ಕೆಜಿಎಫ್ 2’ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಬಿಡುಗಡೆ ಆಗಿತ್ತು. ಈಗ ಒಟಿಟಿಯಲ್ಲೂ ಐದೂ ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೀವು ರೆಂಟ್ ಪಡೆಯಬಹುದು. ಇದಕ್ಕೆ 199 ರೂಪಾಯಿ ಪಾವತಿಸಬೇಕು. ಹಾಗಿದ್ದರೆ ಮಾತ್ರ ನೀವು ‘ಕೆಜಿಎಫ್ 2’ ವೀಕ್ಷಿಸಬಹುದು.199 ರೂಪಾಯಿ ಪಾವತಿಸಿ ಸಿನಿಮಾ ರೆಂಟ್ ಪಡೆದು ಒಮ್ಮೆ ಸಿನಿಮಾ ನೋಡೋಕೆ ಆರಂಭಿಸಿದರೆ 48 ಗಂಟೆಗಳ ಅವಧಿಯಲ್ಲಿ ವೀಕ್ಷಣೆ ಪೂರ್ಣಗೊಳಿಸಬೇಕು. ಒಂದೊಮ್ಮೆ ನೀವು ಸಿನಿಮಾ ರೆಂಟ್‌ಗೆ ಪಡೆದು ವೀಕ್ಷಿಸದೆ ಇದ್ದರೆ ಹಣ ಪಾವತಿಸಿದ ಸಮಯದಿಂದ 30 ದಿನಗಳ ಕಾಲ ಇದರ ವ್ಯಾಲಿಡಿಟಿ ಇರಲಿದೆ. ಈ ಅವಧಿಯಲ್ಲಿ ಯಾವಾಗ ಬೇಕಾದರೂ ಸಿನಿಮಾ ವೀಕ್ಷಿಸಬಹುದು.