ರಾಜ್ಯ

ಸರ್ಕಾರಿ ಕಚೇರಿಗಳಲ್ಲಿ ಲಂಚ ಪಡೆಯುವುದೇ ಒಂದು ನಿಯಮವಾಗಿಬಿಟ್ಟಿದೆ: ಹೈಕೋರ್ಟ್‌ ಬೇಸರ

ಬೆಂಗಳೂರು: ಸರಕಾರಿ ಕಚೇರಿಗಳಲ್ಲಿ ಲಂಚ ಪಡೆಯುವುದೇ ಒಂದು ನಿಯಮವಾಗಿ ಬಿಟ್ಟಿದೆ. ಲಂಚ ನೀಡದಿದ್ದರೆ ಕಡತ ಒಂದಿಂಚೂ ಕದಲುವುದಿಲ್ಲ ಎಂದು ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಜಾಮೀನು ಕೋರಿ ಹಿಂದಿನ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಳಿಸಿದ ತೀರ್ಪಿನಲ್ಲಿ ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ಪೀಠ ಈ ಅನಿಸಿಕೆ ವ್ಯಕ್ತಪಡಿಸಿದೆ.

ಲಂಚಾವತಾರ ಕ್ಯಾನ್ಸರ್‌ಗಿಂತ ಗಂಭೀರವಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ನ್ಯಾಯಪೀಠ, ಭ್ರಷ್ಟಾಚಾರದ ಕುರಿತು ಹಲವು ಮಹತ್ವದ ಅಂಶಗಳನ್ನು ಉಲ್ಲೇಖಿಸಿದೆ.

ಲಂಚವಿಲ್ಲದೆ ಕಡತ ಮುಂದೆ ಹೋಗದುಇತ್ತೀಚೆಗೆ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಲಂಚವಿಲ್ಲದೆ ಕಡತ ಮುಂದಕ್ಕೇ ಹೋಗುವುದಿಲ್ಲ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಿಗೆ ಲಂಚ ಪಡೆಯುವುದೇ ನಿಯಮ ಆಗಿದ್ದು, ಈ ಪ್ರಕರಣದಲ್ಲಿ ಎಲ್ಲ ತಿಳಿದಿದ್ದರೂ ಅರ್ಜಿದಾರ ಮಂಜುನಾಥ್‌ ವಿರುದ್ಧ ಕ್ರಮ ಕೈಗೊಳ್ಳದೆ ಸರಕಾರ ಅವರನ್ನು ಬೇರೆ ಇಲಾಖೆಗೆ ವರ್ಗಾಯಿಸಿದೆ ಎಂದು ನ್ಯಾಯಪೀಠ ಹೇಳಿದೆ. ದೂರುದಾರ ಅಜಂಪಾಷಾ ಹೇಳಿಕೆಯಲ್ಲಿ ಅರ್ಜಿದಾರರ ಹೆಸರು ಉಲ್ಲೇಖಿಸಿದ್ದರೂ ಎಫ್‌ಐಆರ್‌ನಲ್ಲಿ ಅವರ ಹೆಸರಿಲ್ಲ.

ಮಂಜುನಾಥ್‌ಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ, ಸಾಕ್ಷ್ಯನಾಶ ಸಾಧ್ಯತೆ ಅಲ್ಲಗಳೆಯಲಾಗದು. ಆದ್ದರಿಂದ, ಪ್ರಕರಣದ 3ನೇ ಆರೋಪಿಯಾಗಿರುವ ಮಂಜುನಾಥ್‌ಗೆ ಜಾಮೀನು ನೀಡಲಾಗದು ಎಂದು ಹೇಳಿ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಪಂಚನಾಮೆಯಲ್ಲಿ ಮಂಜುನಾಥ್‌ ಹಾಗೂ ದೂರುದಾರ ಅಜಂಪಾಷಾ ನಡುವಿನ ಸಂಭಾಷಣೆ ಉಲ್ಲೇಖಿಸಲಾಗಿದೆ. ಇದರಿಂದ, ದೂರುದಾರರು ಮತ್ತು ಆರೋಪಿಗಳು ಪ್ರಕರಣದ ಬಗ್ಗೆ ಚರ್ಚಿಸಿ ದ್ದಾರೆ ಎನ್ನುವುದು ಬಹಿರಂಗವಾಗಿದ್ದು,

ದಾಖಲೆಯಲ್ಲಿ ಉಲ್ಲೇಖಿಸಿರುವಷ್ಟು ಹಣಕ್ಕೆ ಮೊದಲ ಆರೋಪಿ ಉಪ ತಹಸೀಲ್ದಾರ್‌ ಪಿ.ಎಸ್‌ ಮಹೇಶ್‌ ಬೇಡಿಕೆ ಇಟ್ಟಿದ್ದಾರೆ. ಮಹೇಶ್‌, ಅಜಂ ಪಾಷಾ ಸಂಭಾಷಣೆಯ ಡಿವಿಡಿಯನ್ನೂ ಎಸಿಬಿ ಪೊಲೀಸರು ಕೋರ್ಟಿಗೆ ಸಲ್ಲಿಸಿದ್ದಾರೆ. ಮಂಜುನಾಥ್‌ ಪರ ವಕೀಲರು, ಸಾಮಾನ್ಯವಾಗಿ ಜಿಲ್ಲಾಧಿಕಾರಿ ಆದೇಶ ಸಿದ್ಧಪಡಿಸಿ, ಅಧೀನ ಅಧಿಕಾರಿಗಳಿಗೆ ನೀಡುತ್ತಾರೆ.

ನಂತರ ಜಿಲ್ಲಾಧಿಕಾರಿ ಆದೇಶ ಓದುತ್ತಾರೆಂದು ವಾದಿಸಿದ್ದಾರೆ. ಇದು, ಆದೇಶ ಸಿದ್ಧಪಡಿಸಿ ಓದದೇ ಇಟ್ಟು ಕೊಳ್ಳುವುದು ಲಂಚಕ್ಕಾಗಿ ಬೇಡಿಕೆ ಇಡುವ ಕಂದಾಯ ಇಲಾಖೆಯ ಕಾರ್ಯವಿಧಾನ ಎಂಬುದನ್ನು ಬಹಿರಂಗಪಡಿಸಿದೆ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆಆನೇಕಲ್‌ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಒಡೆತನಕ್ಕೆ ಸಂಬಂಧ ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಡಿ.ಸಿ ಕಚೇರಿಯ ಉಪ ತಹಸೀಲ್ದಾರ್‌ ಪಿ.ಎಸ್‌.ಮಹೇಶ್‌ ಹಾಗೂ ಚೇತನ್‌ ಕುಮಾರ್‌ ಅಲಿಯಾಸ್‌ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಇದೇ ಕೇಸ್‌ನಲ್ಲಿ ಹೈಕೋರ್ಟ್‌ ಚಾಟಿ ಬೀಸಿದ ನಂತರ ಜು.4ರಂದು ಮಂಜುನಾಥ್‌ ಅವರನ್ನು ಬಂಧಿಸಲಾಗಿತ್ತು. ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button