AccidentUncategorized

ಸವಿ ನಿದ್ದೆಯಲ್ಲಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಟ್ರಕ್: ಸ್ಥಳದಲ್ಲೇ ಮೂವರ ಸಾವು, 11 ಮಂದಿ ಸ್ಥಿತಿ ಗಂಭೀರ.

ಚಂಡೀಗಢ: ನಿಯಂತ್ರಣ ಕಳೆದುಕೊಂಡ ಟ್ರಕ್ ಒಂದು ರಸ್ತೆ ಪಕ್ಕದಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಜಾಜ್ಜರ್ ಜಿಲ್ಲೆಯ ಟೋಲ್ ಪ್ಲಾಜಾ ಬಳಿ ನಡೆದಿದೆ.

ಈ ಘಟನೆ ನಸುಕಿನ ಜಾವ ಆಸೊಧಾ ಟೋಲ್ ಪ್ಲಾಜಾದಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಕುಂಡ್ಲಿ-ಮನೇಸಾರ್ ಪಲ್ವಾಲ್ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಟ್ರಕ್ ಉರುಳಿಬಿದ್ದಿರುವುದು ಮತ್ತು ವಲಸೆ ಕಾರ್ಮಿಕರ ರಕ್ತಸಿಕ್ತ ಮೃತದೇಹ ದೃಶ್ಯಗಳು ಭಯಾನಕವಾಗಿವೆ.

ಸ್ಥಳದಲ್ಲೇ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ 10 ಮಂದಿಯನ್ನು ರೊಕ್ಟಕ್‌ನಲ್ಲಿರುವ ಪಿಜಿಐಎಂಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಮಿತ್ ಯಶ್ವರ್ಧನ್ ಹೇಳಿದ್ದಾರೆ.ಕಾರ್ಮಿಕರು ಯಾವ ಕೆಲಸ ಮಾಡುತ್ತಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿರುವ ಯಶ್ವರ್ಧನ್, ಸೇತುವೆ ನಿರ್ಮಾಣ ಯೋಜನೆಯಲ್ಲಿ ಕಾರ್ಮಿಕರು ತೊಡಗಿಕೊಂಡಿದ್ದರು ಎಂದು ಹೇಳಿದ್ದಾರೆ. ಮೃತರ ಹೆಸರು ಇನ್ನು ಖಚಿತವಾಗಿಲ್ಲ.

ಆದರೆ, ಕಾರ್ಮಿಕರು ಉತ್ತರ ಪ್ರದೇಶದ ಎರಡು ಜಿಲ್ಲೆಗಳಿಗೆ ಸಂಬಂಧಿಸಿದವರು ಎಂದು ತಿಳಿದುಬಂದಿದೆ.ಘಟನೆ ನಡೆದ ಬೆನ್ನಲ್ಲೇ ಟ್ರಕ್ ಡ್ರೈವರ್ ಸ್ಥಳದಿಂದ ಕಾಲ್ಕಿತ್ತಿದ್ದಾ ಟ್ರಕ್ ನೋಂದಣಿ ನಂಬರ್‌ನಿಂದ ಮಾಲೀಕನನ್ನು ಪತ್ತೆಹಚ್ಚಲಾಗಿದೆ. ಟ್ರಕ್‌ನಲ್ಲಿ ಇಬ್ಬರು ಚಾಲಕರು ಮತ್ತು ಒಬ್ಬ ಸಹಾಯಕ ಇದ್ದರು ಎಂದು ಮಾಹಿತಿ ನೀಡಿದ್ದಾರೆ. ಅವರ ಹೆಸರುಗಳು ನಮಗೆ ತಿಳಿದಿದೆ. ಆದಷ್ಟು ಬೇಗ ಅವರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.ಅಪಘಾತಕ್ಕೆ ಕಾರಣವೇನು ಎಂದು ಪ್ರಶ್ನಿಸಿದಾಗ, ಅಪಘಾತ ಹೇಗೆ ಸಂಭವಿಸಿತು ಎಂಬುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿ ಹೇಳಿದರು. ಕಾರ್ಮಿಕರು ಬ್ಯಾರಿಕೇಡ್‌ಗಳನ್ನು ಹಾಕಿದರು ಮತ್ತು ಯಾವುದೇ ವಾಹನಗಳನ್ನು ಎಚ್ಚರಿಸಲು ರಿಫೆಕ್ಟರ್‌ಗಳನ್ನು ಅಳವಡಿಸಿದ್ದಾರೆ ಎಂದು ಅವರು ಹೇಳಿದರು.

ಚಾಲಕ ಮದ್ಯಪಾನ ಮಾಡಿರಬಹುದು ಅಥವಾ ನಿದ್ದೆಯ ಮಂಪರಿನಲ್ಲಿ ಮತ್ತು ವಾಹನದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.ಹತ್ತಿರದಲ್ಲೇ ನಡೆಯುತ್ತಿದ್ದ ನಿರ್ಮಾಣ ಯೋಜನೆಯಲ್ಲಿ ಸುಮಾರು 18 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿದ ಬಳಿಕ ಪ್ರತಿದಿನ ಎಕ್ಸ್‌ಪ್ರೆಸ್‌ ಪಕ್ಕದಲ್ಲಿ ಮಲಗುತ್ತಿದ್ದರು. ಇಂದು ನಸುಕಿನ ಜಾವ ನಿಯಂತ್ರಣ ಕಳೆದುಕೊಂಡ ಟ್ರಕ್ ಕಾರ್ಮಿಕರ ಮೇಲೆ ಹರಿದು ದುರಂತ ಸಂಭವಿಸಿದೆ.

Related Articles

Leave a Reply

Your email address will not be published. Required fields are marked *

Back to top button