ರಾಜ್ಯ
ಸಿಎಂ ಎದುರೇ ದಲಿತ ಸಂಘಟನೆಗಳ ಪ್ರತಿಭಟನೆ

ಒಳ ಮೀಸಲಾತಿಗೆ ಆಗ್ರಹಿಸಿ ದಲಿತ ಸಂಘಟನೆಗಳು ಮುಖ್ಯಮಂತ್ರಿಗಳ ಎದುರೇ ಪ್ರತಿಭಟನೆ ನಡೆಸಿದರು.ಬೆಂಗಳೂರು,- ಒಳ ಮೀಸಲಾತಿಗಾಗಿ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲೇ ದಲಿತ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣದ ದಿನದ ಪ್ರಯುಕ್ತ ವಿಧಾನಸೌಧದ ಎದುರುಗಡೆ ಪೂರ್ವ ದಿಕ್ಕಿನ ಕಡೆಗಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಬಂದ ಮುಖ್ಯಮಂತ್ರಿ ಎದುರೇ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ ಪ್ರಸಂಗ ನಡೆಯಿತು.
ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳು ಜಂಬೂ ದ್ವೀಪ ಜನಸೇವೆ ಸಂಘಟನೆಯವರು ಪ್ರತಿಭಟನೆ ನಡೆಸಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವಂತೆ ಹಾಗೂ ನ್ಯಾಯಮೂರ್ತಿ ಎ.ಜೆ ಸದಾಶಿವ ವರದಿ ಅನ್ವಯ ಮಾದಿಗ ಸಮಾಜಕ್ಕೆ ಶೇ. ೬ ರಷ್ಟು ಮೀಸಲಾತಿ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.